ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿನ ಅಂಗಡಿಗಳ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪ ಹಿನ್ನೆಲೆಯಲ್ಲಿ ದೇವಸ್ಥಾನದ ಇಬ್ಬರು ನೌಕರರನ್ನು ಅಮಾನತು ಮಾಡಲಾಗಿದೆ.
ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಆರೋಪ: ಕುಕ್ಕೆ ದೇವಸ್ಥಾನದ ಇಬ್ಬರು ನೌಕರರು ಅಮಾನತು - ಕರ್ನಾಟಕದ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ
ಕರ್ನಾಟಕದ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿನ ಅಂಗಡಿಗಳ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ದೇವಸ್ಥಾನದ ಇಬ್ಬರು ನೌಕರರನ್ನು ಅಮಾನತು ಮಾಡಲಾಗಿದೆ.
Temple
ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿಗಳ ಬಾಡಿಗೆ ವಸೂಲಿ ಮಾಡುವಲ್ಲಿ ಎಡವಿರುವ ಹಿನ್ನೆಲೆ ಅಮಾನತು ಮಾಡಲಾಗಿದೆ. ದೇವಳದ ಆಡಳಿತ ಕಚೇರಿಯ ಸಿಬ್ಬಂದಿ, ಕೇಸ್ ವರ್ಕರ್ಸ್ ಆಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು ಲೋಕೇಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ.
ಈ ನಡುವೆಯೇ ಮತ್ತೊಂದೆಡೆ ಬೇರೆಯವರು ಮಾಡಿದ ತಪ್ಪಿಗೆ ನೌಕರರನ್ನು ಬಲಿ ಪಡೆಯಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ. ಈ ಮಧ್ಯೆ ದೇಗುಲಕ್ಕೆ ಸಂಬಂಧಿಸಿದ ಅಂಗಡಿಯನ್ನು ಬಾಡಿಗೆ ಪಡೆದು ಕೋಟಿಗೂ ಹೆಚ್ಚು ಬಾಡಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವವರ ಮೇಲೆ ದೂರು ನೀಡಲಾಗಿದೆ ಎನ್ನಲಾಗಿದೆ.
TAGGED:
Kukke subhramanya temple