ಕರ್ನಾಟಕ

karnataka

ETV Bharat / state

ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಲು ತಹಶೀಲ್ದಾರ್ ಸೂಚನೆ - Mangalore latest news

ತಹಶೀಲ್ದಾರ್ ಗುರುಪ್ರಸಾದ್ ಅವರು ವಿವಿಧ ಯೋಜನೆಗಳ ಸಮಿತಿ ಸಭೆ ನಡೆಸಿದರು. ಈ ವೇಳೆ ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿನಿ ಶೀಘ್ರ ಕ್ರಮಕ್ಕೆ ಸೂಚಿಸಿದರು.

ಮಂಗಳೂರು
ಮಂಗಳೂರು

By

Published : Sep 11, 2020, 10:46 PM IST

ಮಂಗಳೂರು: ತಾಲೂಕು ವ್ಯಾಪ್ತಿಯಲ್ಲಿ ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಿ ಕೂಡಲೇ ಮಾಹಿತಿ ನೀಡಿದಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಕ್ಕೆ ವಿಕಲಚೇತನರ ಮೇಲೆ ವಿಶೇಷ ಕಾಳಜಿ ಇದ್ದು, ಅವರು ಪಿಂಚಣಿ ವಂಚಿತರಾಗಬಾರದು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಪಿಂಚಣಿ ವಂಚಿತ ವಿಕಲಚೇತನರನ್ನು ಗುರುತಿಸಿ ಸೂಕ್ತ ದಾಖಲೆಗಳ ಪ್ರತಿಯನ್ನು ವಾಟ್ಸ್ಆ್ಯಪ್ ಮೂಲಕ ಪಡೆದುಕೊಂಡು ಮಾಹಿತಿ ನೀಡಬೇಕೆಂದು ಸೂಚಿಸಿದರು.

ವಿಕಲಚೇತನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಪ್ರತೀ ತಿಂಗಳ ಮೊದಲ ಸೋಮವಾರ ವಿಕಲಚೇತನರ ಕುಂದು ಕೊರತೆ ಸಭೆ ನಡೆಸಲಾಗುವುದು. ವಿಕಲಚೇತನರು ಈ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು. ಸರ್ಕಾರದ ಯೋಜನೆಯನ್ವಯ ವಿಕಲಚೇತನರಿಗೆ ನೀಡುವ ವಿವಿಧ ಸವಲತ್ತುಗಳಲ್ಲಿ ಯಾವುದೇ ಲೋಪವಾಗಬಾರದು. ಸಮಸ್ಯೆಗಳಿದ್ದಲ್ಲಿ ತಕ್ಷಣ ಗಮನಕ್ಕೆ ತರಬೇಕು. ವಿಕಲಚೇತನರಿಗೆ ಅನುಕೂಲವಗುವು ದೃಷ್ಟಿಯಿಂದ ಈಗಾಗಲೇ ಎಲ್ಲಾ ಕಚೇರಿಗಳಲ್ಲಿ ವೀಲ್ ಚೇರ್ ಸೌಲಭ್ಯವನ್ನು ಕಡ್ಡಾಯಗೊಳಿಸಲಾಗಿದ್ದು, ಈ ಸೌಲಭ್ಯದ ಬಗ್ಗೆ ಎಲ್ಲಾ ಕಚೇರಿಗಳಲ್ಲಿ ಪರಿಶೀಲನೆ ನಡೆಸಬೇಕು ಎಂದು ಶಿಶು ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details