ಮಂಗಳೂರು:ಚಾಲಕನ ನಿಯಂತ್ರಣ ತಪ್ಪಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಡಾಂಬರು ಸಾಗಾಟದ ಟ್ಯಾಂಕರ್ ಪಲ್ಟಿಯಾಗಿ ಸುಮಾರು ನದಿಗೆ ಉರುಳಿದೆ.
ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ಈ ಘಟನೆ ನಡೆದಿದೆ. ಟ್ಯಾಂಕರ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅರ್ಧದಷ್ಟು ಡಾಂಬರು ಸೋರಿಕೆಯಾಗಿ ನದಿ ನೀರಿನಲ್ಲಿ ಸೇರಿಕೊಂಡಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಬೆದ್ರೋಡಿಯಲ್ಲಿ ಈ ಹಿಂದೆ ಇದ್ದ ತೂಗು ಸೇತುವೆ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ನದಿ ಪಾತ್ರದತ್ತ ಸಂಚರಿಸಿ 100 ಅಡಿ ದೂರದಲ್ಲಿನ ನೇತ್ರಾವತಿ ನದಿಯಲ್ಲಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ.