ಕರ್ನಾಟಕ

karnataka

ETV Bharat / state

ಶಾಲಾ ಮಕ್ಕಳ ರಕ್ಷಾ ಬಂಧನ ತೆಗೆಸಿದ ಶಿಕ್ಷಕಿ: ಪೋಷಕರ ತರಾಟೆ, ನಂತರ ಕ್ಷಮೆಯಾಚನೆ - ಮಂಗಳೂರಿನ ಶಾಲೆಯಲ್ಲಿ ರಾಖಿ ವಿವಾದ

ಮಕ್ಕಳ ಕೈಯಲ್ಲಿದ್ದ ರಾಖಿಯನ್ನು ಶಿಕ್ಷಕಿ ತೆಗೆಸಿದ್ದಾರೆ ಎಂಬ ಮಾಹಿತಿ ಪಡೆದ ಪೋಷಕರು‌ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಮಂಗಳೂರಿನ ಕಾಟಿಪಳ್ಳದಲ್ಲಿರುವ ಶಾಲೆಗೆ ಮುತ್ತಿಗೆ ಹಾಕಿದರು.

a-teacher-removed-raksha-bandhan-from-students-hands-in-mangaluru
ಶಾಲಾ ಮಕ್ಕಳ ರಕ್ಷಾ ಬಂಧನ ತೆಗೆಸಿದ ಶಿಕ್ಷಕಿ: ಪೋಷಕರ ತರಾಟೆ ನಂತರ ಕ್ಷಮೆಯಾಚನೆ

By

Published : Aug 12, 2022, 4:00 PM IST

ಮಂಗಳೂರು: ರಕ್ಷಾ ಬಂಧನ ಹಿನ್ನೆಲೆಯಲ್ಲಿ ಮಕ್ಕಳು ತಮ್ಮ ಕೈಗೆ ಕಟ್ಟಿದ ರಾಖಿಯನ್ನು ಶಿಕ್ಷಕಿಯೊಬ್ಬರು ತೆಗೆಸಿದ ಘಟನೆ ನಗರದ ಹೊರವಲಯದ ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ನಡೆದಿದೆ. ಈ ವಿಚಾರ ತಿಳಿದ ಪೋಷಕರು ಶಾಲೆ ಆಗಮಿಸಿ ತರಾಟೆಗೆ ತೆಗೆದುಕೊಂಡ ನಂತರ ಶಿಕ್ಷಕಿ ಕ್ಷಮೆ ಯಾಚಿಸಿದ್ದಾರೆ.

ಮಕ್ಕಳ ಕೈಯಲ್ಲಿದ್ದ ರಾಖಿ ತೆಗೆಸಿದ ಶಿಕ್ಷಕಿ ಅದನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ಪಡೆದ ಪೋಷಕರು‌ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಮತ್ತು ಶಿಕ್ಷಕರನ್ನು ತೀವ್ರ ತರಾಟೆಗೂ ತೆಗೆದುಕೊಂಡರು.

ಶಾಲಾ ಮಕ್ಕಳ ರಕ್ಷಾ ಬಂಧನ ತೆಗೆಸಿದ ಶಿಕ್ಷಕಿ: ಪೋಷಕರ ತರಾಟೆ ನಂತರ ಕ್ಷಮೆಯಾಚನೆ

ಇದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಸುರತ್ಕಲ್ ಪೊಲೀಸರು ಸ್ಥಳಕ್ಕಾಗಮಿಸಿ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಯಿತು. ಈ ಸಂದರ್ಭದಲ್ಲಿ ಪೋಷಕರು ಪಟ್ಟು ಹಿಡಿದು ಶಾಲಾ ಮುಖ್ಯ ಶಿಕ್ಷಕರು ಮತ್ತು ಕ್ರೈಸ್ತ ಶಿಕ್ಷಣ ಸಂಸ್ಥೆಯ ಫಾದರ್ ಕೈಗೆ ರಾಖಿ ಕಟ್ಟಿದ್ದಾರೆ.

ಶಾಲೆಯ ಸಂಚಾಲಕ ಫಾ.ಸಂತೋಷ್ ಲೋಬೋ ಪ್ರತಿಕ್ರಿಯಿಸಿ, "ಕೆಲವರು ತಿಳಿಯದೇ ಬೇಜವಾಬ್ದಾರಿಯಿಂದ ವರ್ತಿಸಿದ ಕಾರಣಕ್ಕೆ ಈ ವಿವಾದ ಉಂಟಾಗಿದೆ. ನಾವು ಎಲ್ಲ ಪೋಷಕರು ‌ಮತ್ತು ಶಿಕ್ಷಕರ ಜೊತೆ ಸಭೆ ಮಾಡಿದ್ದೇವೆ. ಈ ವೇಳೆ ತಪ್ಪು ಮಾಡಿದವರು ಪಶ್ಚಾತ್ತಾಪ ಪಟ್ಟು ಕ್ಷಮೆ ಕೇಳಿದ್ದಾರೆ. ಈಗ ಸಮಸ್ಯೆ ಪರಿಹಾರವಾಗಿದೆ" ಎಂದು ತಿಳಿಸಿದರು.

ಇದನ್ನೂ ಓದಿ:ಸಿಎಂ ಬಸವರಾಜ​ ಬೊಮ್ಮಾಯಿ‌ ನಿವಾಸದಲ್ಲಿ ರಕ್ಷಾ ಬಂಧನ ಸಂಭ್ರಮ

ABOUT THE AUTHOR

...view details