ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕು ಮುಕ್ತಿಗಾಗಿ ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಧನ್ವಂತರಿ ಯಾಗ - ಮಂಗಳೂರು ದೇವಾಲಯಗಳು ಓಪನ್ ಸುದ್ದಿ

ಎರಡು ತಿಂಗಳ ಬಳಿಕ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಆದೇಶದಂತೆ ಇಂದಿನಿಂದ ದೇವಾಲಯಗಳು ಭಕ್ತರ ಪ್ರವೇಶಕ್ಕೆ ಮುಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿಯೂ ಭಕ್ತರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ಕೈಬಿಡಲಾಗಿದೆ.

ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಧನ್ವಂತರಿ ಯಾಗ
ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಧನ್ವಂತರಿ ಯಾಗ

By

Published : Jun 8, 2020, 10:20 AM IST

ಮಂಗಳೂರು: ನಗರದ ವಿಶ್ವ ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದಲ್ಲಿ ಧನ್ವಂತರಿ ಯಾಗ ನಡೆಯಿತು.

ಎರಡು ತಿಂಗಳ ಬಳಿಕ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಆದೇಶದಂತೆ ಇಂದಿನಿಂದ ದೇವಾಲಯಗಳು ಭಕ್ತರ ಪ್ರವೇಶಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿಯೂ ಭಕ್ತರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ಕೈಬಿಡಲಾಗಿದೆ.

ಆದ್ದರಿಂದ ಬೆಳಗ್ಗೆಯೇ ಭಕ್ತರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತರು ಆಗಮಿಸಿ ಶ್ರೀ ಗೋಕರ್ಣನಾಥ ಹಾಗೂ ಪರಿವಾರ ದೇವರ ದರ್ಶನ ಪಡೆದರು. ಬೆಳಗ್ಗೆ 8.30 ಸುಮಾರಿಗೆ ಕೊರೊನಾ ಸೋಂಕು ಮುಕ್ತಿಗಾಗಿ ಧನ್ವಂತರಿ ಯಾಗ ನಡೆಯಿತು. ಅಲ್ಲದೆ ಬೆ. 11.30 ಕ್ಕೆ ಶ್ರೀ ಗೋಕರ್ಣನಾಥ ದೇವರಿಗೆ ಶತಸೀಯಾಳಾಭಿಷೇಕ ನಡೆಯಲಿದೆ.

ಕೊರೊನಾ ಸೋಂಕು ಮುಕ್ತಿಗಾಗಿ ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಧನ್ವಂತರಿ ಯಾಗ

ದೇವಾಲಯ ಪ್ರವೇಶಿಸುವ ಸಂದರ್ಭ ಭಕ್ತರು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೇವಾಲಯದ ಆಡಳಿತ ಮಂಡಳಿ ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿಯೇ ದೇವಾಲಯ ಪ್ರವೇಶಿಸಬೇಕು. ದೇವಸ್ಥಾನದ ದ್ವಾರದ ಬಳಿಯೇ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಕೈಶುಚಿಗೊಳಿಸಿಯೇ ದೇವಾಲಯ ಪ್ರವೇಶಿಸಬೇಕು‌.

ಅಲ್ಲದೆ ಸ್ಕ್ರೀನಿಂಗ್ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಭಕ್ತರು ಗಂಟೆ ಹೊಡೆಯುವಂತಿಲ್ಲ. ಮೂರ್ತಿ ಇತ್ಯಾದಿ ದೇವಾಲಯದ ಸೊತ್ತುಗಳನ್ನು ಮುಟ್ಟುತಿಲ್ಲ. ಅಲ್ಲದೆ ತೀರ್ಥ, ಗಂಧ ಪ್ರಸಾದ ವಿತರಣೆ ಮಾಡಲಾಗುತ್ತಿಲ್ಲ. ಆದರೆ ಪ್ಯಾಕೇಟ್​​ ಪ್ರಸಾದ ನೀಡುವ ವ್ಯವಸ್ಥೆ ಇದೆ. ಅದೇ ರೀತಿ ದೇವಸ್ಥಾನ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರಗಳ ವ್ಯವಸ್ಥೆ ಮಾಡಲಾಗಿದ್ದು, ಭಕ್ತರು ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮೈಕ್ ಮೂಲಕ ನಿರಂತರ ತಿಳಿಸಲಾಗ್ತಿದೆ.

ABOUT THE AUTHOR

...view details