ಉಳ್ಳಾಲ:ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಬಳಿ ದ್ವಿಚಕ್ರ ವಾಹನ ಹಾಗೂ ಟೆಂಪೋ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಟೆಂಪೋ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು - ದ್ವಿಚಕ್ರ ವಾಹನ ಸವಾರ ಸಾವು
ದ್ವಿಚಕ್ರ ವಾಹನ ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಬಳಿ ನಡೆದಿದೆ. ಮಹಮ್ಮದ್ ರಮೀಜ್ (19) ಮೃತಪಟ್ಟ ಯುವಕ.
ಟೆಂಪೋ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು
ಮಂಜನಾಡಿ ತೌಡುಗೋಳಿ ಕ್ರಾಸ್ನ ಮಹಮ್ಮದ್ ಮುಸ್ತಫಾ ಅವರ ಪುತ್ರ ಮಹಮ್ಮದ್ ರಮೀಜ್ (19) ಮೃತಪಟ್ಟ ಯುವಕ. ರಮೀಜ್ ಅವರು ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ಬರುತಿದ್ದ ಟೆಂಪೋವೊಂದು ಡಿಕ್ಕಿ ಹೊಡೆದಿದೆ. ಪಡಿಣಾಮ ತಲೆಗೆ ಗಂಭೀರ ಗಾಯವಾಗಿದ್ದು, ಯುವಕನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.