ಮಂಗಳೂರು: ಕೊರೊನಾ ಸೋಂಕಿತರಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಆರು ವರ್ಷದ ಗಂಡು ಮಗು ಸೇರಿ ಐವರು ಪುರುಷರು ಹಾಗೂ ನಾಲ್ವರು ಮಹಿಳೆಯರು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಇವರೆಲ್ಲರೂ ಕೊರೊನಾ ಸೋಂಕಿತರಾಗಿ ಮೇ 15ರಂದು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಮನೆಗೆ ತೆರಳಿದ ಇವರೆಲ್ಲರೂ 14 ದಿನಗಳ ಹೋಮ್ ಕ್ವಾರಂಟೈನ್ಗೆ ಒಳಗಾಗಲಿದ್ದಾರೆ.
ಹತ್ತು ಮಂದಿ ಕೊರೊನಾ ಸೋಂಕಿತರು ಗುಣಮುಖ ಕೋವಿಡ್ -19 ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 58 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 113 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 89 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, 24 ಜನರಲ್ಲಿ ಸೋಂಕು ದೃಢಗೊಂಡಿದೆ. 1004 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 43 ಮಂದಿ ನಿಗಾದಲ್ಲಿದ್ದಾರೆ.
28 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ನಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, 27 ಮಂದಿಯನ್ನು ಸುರತ್ಕಲ್ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯ ಕ್ವಾರಂಟೈನ್ನಲ್ಲಿ ಯಾರೂ ಇಲ್ಲ. 6,073 ಮಂದಿ 28 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 133 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 42,397 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ.
ಈವರೆಗೆ 8,676 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 6,830 ಮಂದಿಯ ವರದಿ ಬಂದಿದೆ. ಅದರಲ್ಲಿ 6,725 ಮಂದಿಯ ವರದಿ ನೆಗೆಟಿವ್ ಬಂದಿದೆ. 105 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 39 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 59 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.