ಮಂಗಳೂರು: ಕೊರೊನಾ ಭೀತಿ ಹಿನ್ನೆಲೆ ಮಂಗಳೂರಿನಲ್ಲಿ ಇಂದು 156 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ದೃಢಪಟ್ಟಿರುವ ಪ್ರದೇಶದ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕ ಹೊಂದಿದವರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ ಪರಿಣಾಮ ಈ ಸಂಖ್ಯೆ ಹೆಚ್ಚಾಗಿದೆ.
ಈ ಹಿಂದೆ ಕಳುಹಿಸಲಾದ 12 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 12 ನೆಗೆಟಿವ್ ಬಂದಿದೆ. ಈವರೆಗೆ 468 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 12 ಪಾಸಿಟಿವ್ ಮತ್ತು 456 ನೆಗೆಟಿವ್ ಬಂದಿದೆ.