ಕರ್ನಾಟಕ

karnataka

ETV Bharat / state

ಬೆಳಕಿನ ಹಬ್ಬ ಸುಜ್ಞಾನದ ಪ್ರತೀಕ: ವೀರೇಂದ್ರ ಹೆಗ್ಗಡೆಯವರಿಂದ ದೀಪಾವಳಿ ಸಂದೇಶ

ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ದೀಪಾವಳಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯ, ಹೊಣೆಗಾರಿಕೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸಂದೇಶ ನೀಡಿದ್ದಾರೆ.

ಡಾ. ವೀರೇಂದ್ರ ಹೆಗ್ಗಡೆ
ಡಾ. ವೀರೇಂದ್ರ ಹೆಗ್ಗಡೆ

By

Published : Nov 13, 2020, 9:43 PM IST

ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ಈ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸಂದೇಶ ರವಾನಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯ, ಹೊಣೆಗಾರಿಕೆಯಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ.

ABOUT THE AUTHOR

...view details