ಪುತ್ತೂರು: ನ.18ರ ತಡ ರಾತ್ರಿ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ನಡೆದಿದ್ದ ಅಜ್ಜ, ಮೊಮ್ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ನ.22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೋರ್ಟ್ ಆರೋಪಿಯನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿದೆ.
ಅಜ್ಜ,ಮೊಮ್ಮಗಳ ಜೋಡಿ ಕೊಲೆ ಪ್ರಕರಣ.. ಆರೋಪಿ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್.. - puttur Double Murder News
ನ.18ರ ತಡ ರಾತ್ರಿ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ನಡೆದಿದ್ದ ಅಜ್ಜ, ಮೊಮ್ಮಗಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಪೊಲೀಸರು ನ.22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಯನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಜೋಡಿ ಕೊಲೆ ಆರೋಪಿ ಪೊಲೀಸ್ ಕಸ್ಟಡಿಗೆ
ಜೋಡಿ ಕೊಲೆ ಆರೋಪಿ ಪೊಲೀಸ್ ಕಸ್ಟಡಿಗೆ..
ಕೊಲೆ ಪ್ರಕರಣದ ಆರೋಪಿಯನ್ನು ನ.20ರಂದು ಬಂಧಿಸಿದ್ದರೂ ಕೊಲೆ ನಡೆಯುವ ಸಂದರ್ಭದಲ್ಲಿ ಆತನ ಕೈಗೂ ಗಾಯವಾಗಿದ್ದ ಹಿನ್ನೆಲೆಯಲ್ಲಿ ಆತನನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ನ. 22ರಂದು ಬೆಳಗ್ಗೆ ಆಸ್ಪತ್ರೆಯಿಂದ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪೊಲೀಸರು ಆರೋಪಿಯನ್ನ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಆರೋಪಿಯನ್ನು ಒಂದು ದಿನದ ಕಸ್ಟಡಿಗೆ ನೀಡಿದೆ.