ನೆಲ್ಯಾಡಿ :ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಂಚನ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ನೀರಿಗೆ ಬಿದ್ದು ಕೊಚ್ಚಿಹೋಗುತ್ತಿದ್ದ ಪಿಕಪ್ ವಾಹನ ಮತ್ತು ಚಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಪಿಕಪ್ ವಾಹನ ; ಸ್ಥಳೀಯರಿಂದಾಗಿ ಚಾಲಕ ಪಾರು - Dakshina Kannada District News
ಸ್ಥಳದಲ್ಲಿದ್ದ ವ್ಯಕ್ತಿ ತೌಫೀಕ್ ಎಂಬುವರು ತಕ್ಷಣವೇ ನೀರಿಗಿಳಿದು ಕೊಚ್ಚಿ ಹೋಗುತ್ತಿದ್ದ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ಲಾರಿಯಿಂದ ಎಳೆಸಿದ್ದಾರೆ. ಇದಕ್ಕೆ ಸ್ಥಳೀಯರು ಸಹಕಾರ ನೀಡಿದ್ದರಿಂದಾಗಿ ವಾಹನವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ..
ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ಆರೀಫ್ ಎಂಬುವರು ಚಲಾಯಿಸುತ್ತಿದ್ದ ಪಿಕಪ್ ವಾಹನವು ರಸ್ತೆ ಬದಿಯಲ್ಲಿ ಹರಿಯುತ್ತಿರುವ ತೋಡಿಗೆ ನಿಯಂತ್ರಣ ತಪ್ಪಿ ಬಿದ್ದಿದೆ.
ಸ್ಥಳದಲ್ಲಿದ್ದ ವ್ಯಕ್ತಿ ತೌಫೀಕ್ ಎಂಬುವರು ತಕ್ಷಣವೇ ನೀರಿಗಿಳಿದು ಕೊಚ್ಚಿ ಹೋಗುತ್ತಿದ್ದ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ಲಾರಿಯಿಂದ ಎಳೆಸಿದ್ದಾರೆ. ಇದಕ್ಕೆ ಸ್ಥಳೀಯರು ಸಹಕಾರ ನೀಡಿದ್ದರಿಂದಾಗಿ ವಾಹನವನ್ನು ನೀರಿನಿಂದ ಮೇಲಕ್ಕೆ ಎತ್ತಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜತೆಗೆ ಪ್ರಾಣಾಪಾಯಕ್ಕೆ ಸಿಲುಕಿದ್ದ ವಾಹನದ ಚಾಲಕ ಆರೀಫ್ ಅವರನ್ನೂ ಸ್ಥಳೀಯರು ಬಚಾವ್ ಮಾಡಿದ್ದಾರೆ.