ಮಂಗಳೂರು: ಸಂಖ್ಯಾ ಬಲ ಇಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲರ ಕ್ರಮ ಸರಿ ಇಲ್ಲ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ವಜಾಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ನ್ಯಾಯಾಲಯದ ಮೊರೆ ಹೋದ್ರೆ ಸರ್ಕಾರ ವಜಾ ಗ್ಯಾರಂಟಿ: ಐವನ್ ಡಿಸೋಜ - ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ,
ಸಂಖ್ಯಾ ಬಲ ಇಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲರ ಕ್ರಮ ಸರಿ ಇಲ್ಲ. ಈ ಬಗ್ಗೆ ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ವಜಾಗೊಳ್ಳಲಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐವನ್ ಡಿಸೋಜ, ರಾಜ್ಯಪಾಲರು ಶೀಘ್ರವಾಗಿ ಪ್ರಮಾಣವಚನ ಬೋಧಿಸಿದ್ದಾರೆ. ಅವರಿಗೆ ಸಂಖ್ಯಾಬಲ ಇಲ್ಲದೆ ಪ್ರಮಾಣ ವಚನ ಬೋಧಿಸಿದ್ದಾರೆ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ವಜಾ ಆಗಬಹುದು ಎಂದಿದ್ದಾರೆ.
ಹಾಗೆಯೇ ಈ ವಿಷಯದ ಬಗ್ಗೆ ಪಕ್ಷದ ಅಧ್ಯಕ್ಷರಲ್ಲಿ ಚರ್ಚಿಸಿರುವುದಾಗಿ ಅವರು ತಿಳಿಸಿದರು.