ಸುಳ್ಯ (ದಕ್ಷಿಣ ಕನ್ನಡ) :ಇಲ್ಲಿನ ಅಜ್ಜಾವರ ಗ್ರಾಮ ವ್ಯಾಪ್ತಿಯ ಮುಳ್ಯಕಜೆ ಎಂಬಲ್ಲಿ ಅಕ್ರಮವಾಗಿ ಹಲಸು ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ರಾತ್ರಿ ಗಸ್ತು ತಿರುಗುತ್ತಿದ್ದ ಸುಳ್ಯ ವಲಯದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನ ಹಾಗೂ ಮೂವರನ್ನು ಬಂಧಿಸಿದ್ದು, ಒಟ್ಟು ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಧಿತರಿಂದ ವಾಹನ ಸೇರಿ ಒಟ್ಟು 4.5 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಅಡ್ಕಾರು ನಿವಾಸಿ ಮೊಹಮ್ಮದ್ ಮಜೀದ್ ನಡುವಡ್ಕಮನೆ ಹಾಗೂ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ವಾಹನ ಚಾಲಕರಾದ ಮೊಹಮ್ಮದ್ ಶಫೀಕ್, ಇಬ್ರಾಹಿಂ ಭಾತೀಷ ಹಾಗೂ ಸುಂದರ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.