ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ, ಸೋರ್ನಾಡು ಎಂಬಲ್ಲಿ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ಪೊದೆಗೆ ಡಿಕ್ಕಿ ಹೊಡೆದ ಪರಿಣಾಮ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಹಲವರಿಗೆ ಗಾಯ - undefined
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ, ಸೋರ್ನಾಡುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಪಕ್ಕದಲ್ಲಿದ್ದ ಪೊದೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಸಂಚರಿಸುತ್ತಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೀಡಾದ ಬಸ್
ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ನಿಂದ ಮೂಡಬಿದ್ರೆಗೆ ತೆರಳುತ್ತಿದ್ದ ವೇಳೆ ಸೋರ್ನಾಡುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.
ಬಸ್ನಲ್ಲಿ ಸಂಚರಿಸುತ್ತಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರ ಠಾಣಾ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.