ಕರ್ನಾಟಕ

karnataka

ETV Bharat / state

ಯುವಕನಿಗೆ ಚೂರಿ ಇರಿತ: ಶಾಂತವಾದ ಮಂಗಳೂರಲ್ಲಿ ದುಷ್ಕರ್ಮಿಗಳ ಅಟ್ಟಹಾಸ - ಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ

ಮಂಗಳೂರಲ್ಲಿ ದುಷ್ಕರ್ಮಿಗಳು ಯುವಕನೋರ್ವನಿಗೆ ಚೂರಿಯಿಂದ ಇರಿದಿದ್ದಾರೆ. ಪರಿಸ್ಥಿತಿ ಶಾಂತವಾದ ಬೆನ್ನಲ್ಲೇ ಕಿಡಿಗೇಡಿಗಳು ಈ ಅಟ್ಟಹಾಸ ಮೆರೆದಿದ್ದಾರೆ.

young man was stabbed with a knife
ಮಂಗಳೂರಿನಲ್ಲಿ ಯುವಕನಿಗೆ ಚೂರಿ ಇರಿತ

By

Published : Dec 22, 2019, 8:12 AM IST

ಮಂಗಳೂರು: ನಗರದಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿದಿರುವ ಘಟನೆ ತೊಕ್ಕೊಟ್ಟುವಿನ ಅಂಬಿಕಾ ರೋಡ್​ನಲ್ಲಿ ನಡೆದಿದೆ. ಚೂರಿ ಇರಿತದಿಂದ ಯುವಕಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೂರಿ ಇರಿದ ತಂಡ ಪರಾರಿಯಾಗಿದೆ.

ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಈ ವೇಳೆ ಇಬ್ಬರು ಸಾವನ್ನಪ್ಪಿದ್ದರು. ಬಳಿಕ ನಗರದಲ್ಲಿ ಪೊಲೀಸರು ಕರ್ಫ್ಯೂ ಜಾರಿಗೊಳಿಸಿದ್ದರು. ಇದರಿಂದ ಪರಿಸ್ಥಿತಿ ಶಾಂತವಾಗಿತ್ತು. ಇದರ ಬೆನ್ನಲ್ಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ.

ABOUT THE AUTHOR

...view details