ಬೆಳ್ತಂಗಡಿ:ಬೆಳ್ತಂಗಡಿ ಠಾಣಾ ವ್ಯಾಪ್ತಿಯ ವೇಣೂರು, ಧರ್ಮಸ್ಥಳ ಮತ್ತು ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 7 ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಏಳು ಕಳ್ಳತನ ಪ್ರಕರಣ: ಬೆಳ್ತಂಗಡಿಯಲ್ಲಿ ಮೂವರು ಆರೋಪಿಗಳ ಬಂಧನ
ಬೆಳ್ತಂಗಡಿ ಠಾಣಾ ವ್ಯಾಪ್ತಿಯ ವೇಣೂರು, ಧರ್ಮಸ್ಥಳ ಮತ್ತು ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 7 ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 5.50 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮುಂಡಾಜೆ ನಿವಾಸಿ ಸತೀಶ (33), ಪುತ್ತೂರು ಆರ್ಯಾಪು ನಿವಾಸಿ ರವಿ (29), ಮಂಗಳೂರು ಕುರುಪು ನಿವಾಸಿ ಹರೀಶ್ ಪೂಜಾರಿ (29) ಬಂಧಿತ ಆರೋಪಿಗಳು. ಬಂಧಿತರಿಂದ 1 ಮಾರುತಿ 800, ಎರಡು ಬೈಕ್, ಚಿನ್ನಾಭರಣ, 5 ಮೊಬೈಲ್ ಹಾಗೂ ಲ್ಯಾಪ್ಟಾಪ್ ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ ಸುಮಾರು 5,50,000 ರೂ. ಎಂದು ಅಂದಾಜಿಸಲಾಗಿದೆ.
ಆರೋಪಿಗಳ ವಿರುದ್ಧ ಒಟ್ಟು ಏಳು ಪ್ರಕರಣಗಳ ವಿಚಾರವಾಗಿ ಧರ್ಮಸ್ಥಳ, ವೇಣೂರು, ಪುತ್ತೂರು ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಂಟ್ವಾಳ ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ವೆಲೈಂಟೈನ್ ಡಿಸೋಜಾ, ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಸೇರಿದಂತೆ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.