ಮಂಗಳೂರು: ಕೊರೊನಾ ಆರಂಭದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಶೂನ್ಯ ಪ್ರಕರಣ ದಾಖಲಾಗಿದೆ. 2020 ಮಾರ್ಚ್‌ನಲ್ಲಿ ಮೊದಲ ಬಾರಿಗೆ ಜಿಲ್ಲೆಯಲ್ಲಿ ಸೋಂಕು ಪತ್ತೆಯಾದ ಬಳಿಕ ಈವರೆಗೂ ಪ್ರತಿದಿನವೂ ಪ್ರಕರಣಗಳು ಪತ್ತೆಯಾಗುತ್ತಿದ್ದವು.
ಕೊರೊನಾ ಆರಂಭದ ಬಳಿಕ ಮೊದಲ ಬಾರಿಗೆ ದ.ಕ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಪ್ರಕರಣಗಳು ರಾಜ್ಯದಲ್ಲಿ ಎರಡನೇ ಅಥವಾ ಮೂರನೇ ಸ್ಥಾನದಲ್ಲಿ ಇರುತ್ತಿದ್ದವು. ಕೆಲವು ದಿನಗಳಲ್ಲಿ ರಾಜ್ಯದಲ್ಲೇ ಅತ್ಯಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ ಇಂದು ಒಂದೂ ಪ್ರಕರಣ ಸಹ ವರದಿಯಾಗಿಲ್ಲ.
ಇದನ್ನೂ ಓದಿ: ಆಯಸ್ಸು ಗಟ್ಟಿಯಾಗಿದ್ರೆ... 3ನೇ ಮಹಡಿಯಿಂದ ಬಿದ್ದರೂ ಬದುಕುಳಿದ ಮಗು!
ಇತ್ತೀಚೆಗೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗಿದ್ದು ಇಂದು ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಓರ್ವ ಕೊರೊನಾ ಸೋಂಕಿತ ಇಂದು ಗುಣಮುಖರಾಗಿದ್ದು, 10 ಮಂದಿ ಸಕ್ರಿಯ ಸೋಂಕಿತರಿದ್ದಾರೆ.