ಪುತ್ತೂರು:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಕರ ಮತ್ತು ಕೃಷಿ ಕ್ಷೇತ್ರದ ಸುಧಾರಣೆ ಸಂಬಂಧಿತ ಹೊಸ ಕಾಯ್ದೆಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ರೈತಮೋರ್ಚಾ ಸ್ವಾಗತಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಎ.ವಿ. ತೀರ್ಥರಾಮ, ಕೇಂದ್ರ ಸರ್ಕಾರವು ದೇಶದ ಕೃಷಿ ಉತ್ಪನ್ನಕ್ಕಾಗಿ ಮಾರುಕಟ್ಟೆ ಸೃಷ್ಟಿಸುವ ಉದ್ದೇಶದಿಂದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವ ಸಾಧ್ಯತೆ ಇರುವ ನೂತನ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಮಸೂದೆಗಳ ಮೂಲಕ ರೈತರು ಮುಕ್ತವಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಬಹುದು. ವ್ಯಾಪಾರಿಗಳಿಗೂ ತಮಗೆ ಬೇಕಾದ ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಖರೀದಿಸುವ ಅವಕಾಶ ಕಲ್ಪಿಸುತ್ತದೆ ಎಂದರು.