ಮಂಗಳೂರು: ಮನೆಯೊಂದರಲ್ಲಿ ನಡೆಸಿದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿದ್ದಾರೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಕಲಾಯಿ ಮನೆಯ ಇಬ್ರಾಹೀಂ ಕಲಂದರ್(31) ಬಂಧಿತ ಆರೋಪಿ.
ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕ ಮತ್ತು ಠಾಣಾ ಸಿಬ್ಬಂದಿ ಆರೋಪಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಎಂಬಲ್ಲಿ ಬಂಧಿಸಿ, ಸುಮಾರು 50 ಸಾವಿರ ರೂ. ಮೌಲ್ಯದ 20 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.