ಕರ್ನಾಟಕ

karnataka

ETV Bharat / state

ಅಡಿಕೆ ದೋಚಿದ ಕಳ್ಳರು, ಓರ್ವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಮಾಲಿಕ - ಬೆಳ್ಳಾರೆ ಠಾಣೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದಲ್ಲಿ ತಲ್ವಾರಿನಿಂದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಅಡಿಕೆ ದೋಚಿದ ಘಟನೆ ನಡೆದಿದೆ. ಈ ವೇಳೆ ಓರ್ವ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಕಡಬ
ಕಡಬ

By ETV Bharat Karnataka Team

Published : Nov 26, 2023, 3:49 PM IST

Updated : Nov 29, 2023, 5:27 PM IST

ಅಡಿಕೆ ದೋಚುತ್ತಿದ್ದ ವೇಳೆ ಆರೋಪಿಯನ್ನು ಹಿಡಿದ ಸ್ಥಳೀಯರು

ಕಡಬ (ದಕ್ಷಿಣ ಕನ್ನಡ) : ಅಡಿಕೆಯನ್ನು ಕದ್ದು ವಾಹನಕ್ಕೆ ತುಂಬಿಸುತ್ತಿರುವುದನ್ನು ಕಂಡು ಅದನ್ನು ತಡೆದ ವೇಳೆ ಅಪರಿಚಿತ ವ್ಯಕ್ತಿಗಳು ವ್ಯಕ್ತಿಯೋರ್ವರಿಗೆ ತಲವಾರಿನಿಂದ ಹಲ್ಲೆ ನಡೆಸಿ, ಕದ್ದ ಅಡಿಕೆಯೊಂದಿಗೆ ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಕಳ್ಳನನ್ನು ಅಡಿಕೆ ಚೀಲಗಳ ಮಾಲೀಕ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ನಡೆದಿದೆ.

ಈ ಬಗ್ಗೆ ಕಡಬ ತಾಲೂಕಿನ ಸವಣೂರು ಗ್ರಾಮದ ಕಡಬ ನಿವಾಸಿ ಎ. ಆರ್. ಚಂದ್ರ ಎಂಬುವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.

ದೂರಿನಲ್ಲೇನಿದೆ..? :ದಿನಾಂಕ 25.11.2023 ರಂದು ಬೆಳಗಿನ ಜಾವ 03.30 ಸುಮಾರಿಗೆ ತಮ್ಮ ಮಗನಾದ ನಿಷ್ಕಲ್ ರಾಮ ಮೈಸೂರಿನಿಂದ ಮೋಟಾರ್ ಸೈಕಲಿನಲ್ಲಿ ತಮ್ಮ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಬಂದಿದ್ದರು. ಈ ವೇಳೆ ಮನೆಯ ಅಂಗಳದಲ್ಲಿ ಒಂದು ಕಾರು ಮತ್ತು ಒಂದು ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ತಾವು ತಂದಿದ್ದ ವಾಹನಗಳಲ್ಲಿ ತನ್ನ ಮನೆಯ ಅಡಿಕೆಯನ್ನು ಕದ್ದು ತುಂಬಿಸುತ್ತಿರುವುದು ಕಂಡು ಬಂದಿದೆ.

ಈ ಬಗ್ಗೆ ನಿಷ್ಕಲ್ ರಾಮ ಅವರು ಪ್ರಶ್ನಿಸಿದ್ದು, ಈ ವೇಳೆ ಈ ಅಪರಿಚಿತ ವ್ಯಕ್ತಿಗಳು ನಿಷ್ಕಲ್ ರಾಮ ಅವರಿಗೆ ತಲವಾರಿನಿಂದ ಹಲ್ಲೆ ನಡೆಸಿ, ಅವರ ಪೈಕಿ ಓರ್ವ ಆರೋಪಿಯು ಅದಾಗಲೇ ಎರಡು ಗೋಣಿ ಚೀಲದಲ್ಲಿ ಸುಲಿದು ತುಂಬಿಸಿಟ್ಟಿದ್ದ ಅಂದಾಜು ರೂ. 24000/- ರೂ. ಮೌಲ್ಯದ ಅಡಿಕೆಯನ್ನು ಸ್ಕೂಟರಲ್ಲಿ ಇಟ್ಟುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೊಬ್ಬ ಆರೋಪಿಯು ಕಾರಿನಲ್ಲಿ ತುಂಬಿಸಿಟ್ಟಿದ್ದ ಅಂದಾಜು ರೂ. 75000/- ಮೌಲ್ಯದ 8 ಪ್ಲಾಸ್ಟಿಕ್ ಚೀಲ ಸುಲಿಯದ ಅಡಿಕೆಯೊಂದಿಗೆ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದ. ಈ ವೇಳೆ ಗಲಾಟೆ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಆತನನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ, ಆತನು ತನ್ನ ಹೆಸರು ಬಶೀರ್ ಎಂಬುದಾಗಿ ಹಾಗೂ ತನ್ನೊಂದಿಗಿದ್ದು ಪರಾರಿಯಾದ ವ್ಯಕ್ತಿಯ ಹೆಸರು ಹಕೀಂ ಎಂಬುದಾಗಿ ತಿಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಳಿಕ ಆರೋಪಿಯನ್ನು ಬೆಳ್ಳಾರೆ ಠಾಣೆಗೆ ಕರೆತಂದು ಘಟಣೆಯ ಬಗ್ಗೆ ದೂರು ನೀಡಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ :ಅಡಿಕೆ ವ್ಯಾಪಾರಿಯನ್ನು ಯಾಮಾರಿಸಿ ₹1 ಕೋಟಿ ದೋಚಿದ್ದ ಕಾರು ಚಾಲಕ ಸೇರಿ ನಾಲ್ವರ ಬಂಧನ

Last Updated : Nov 29, 2023, 5:27 PM IST

ABOUT THE AUTHOR

...view details