ಪುತ್ತೂರು : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ವೃತ್ತ ನಿರೀಕ್ಷರಾಗಿದ್ದ ತಿಮ್ಮಪ್ಪ ನಾಯ್ಕ ಅವರನ್ನು ರಾಜ್ಯ ಪೊಲೀಸ್ ಇಲಾಖೆ ವರ್ಗಾವಣೆಗೊಳಿಸಿ ಇಂದು ಆದೇಶ ನೀಡಿದೆ. ಅವರ ಸ್ಥಾನಕ್ಕೆ ಎಂ.ಗೋಪಾಲ ನಾಯ್ಕ ಅವರನ್ನು ನಿಯೋಜಿಸಿದೆ.
ತಿಮ್ಮಪ್ಪ ನಾಯ್ಕ ವರ್ಗಾವಣೆ; ನೂತನ ವೃತ್ತ ನಿರೀಕ್ಷಕರಾಗಿ ಎಂ ಗೋಪಾಲ ನಾಯ್ಕ ನಿಯೋಜನೆ - State Police Department
ಪುತ್ತೂರು ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರನ್ನು ಮಂಗಳೂರು ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ನೀಡಿದೆ.
ತಿಮ್ಮಪ್ಪ ನಾಯ್ಕ ಅವರಿಗೆ ವರ್ಗಾವಣೆ
ನಕ್ಸಲ್ ನಿಗ್ರಹ ಪಡೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಮಿತ್ತೂರು ನಿವಾಸಿ ತಿಮ್ಮಪ್ಪ ನಾಯ್ಕ ಅವರು ಕಳೆದ ಎರಡು ವರ್ಷಗಳಿಂದ ಪುತ್ತೂರು ನಗರ ಠಾಣಾ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಮಂಗಳೂರು ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಗೋಪಾಲ ನಾಯ್ಕ ಅವರನ್ನು ನಿಯೋಜಿಸಲಾಗಿದೆ.
Last Updated : Sep 16, 2020, 10:42 PM IST