ಮಂಗಳೂರು:ನಗರದ ಸುಂಕದಕಟ್ಟೆ ದೇವಸ್ಥಾನವೊಂದರಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮೊಯ್ದಿನ್ ಬಾವ ಅವರಿಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೇವಸ್ಥಾನದ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಶಾಸಕ ಮೊಯ್ದಿನ್ ಬಾವಗೆ ಬೆದರಿಕೆ ಕರೆ; ದೂರು ದಾಖಲು
ಸುಂಕದಕಟ್ಟೆ ದೇವಸ್ಥಾನವೊಂದರಲ್ಲಿ ಪೂಜೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮೊಯ್ದಿನ್ ಬಾವ ಅವರಿಗೆ ಬೆದರಿಕೆ ಕರೆ ಬಂದಿದ್ದು, ಈ ಬಗ್ಗೆ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುಂಕದಕಟ್ಟೆ ದೇವಸ್ಥಾನ ಆಡಳಿತ ಮಂಡಳಿಯ ವಿನಂತಿಯಂತೆ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ದೇವಸ್ಥಾನದ ಕೊಪ್ಪರಿಗೆಗೆ ಅಕ್ಕಿ ಹಾಕುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಎರಡು ದಿನಗಳ ಹಿಂದೆ ಅವರಿಗೆ ಮುಂಬೈನಿಂದ ಅಪರಿಚಿತ ವ್ಯಕ್ತಿಯೊಬ್ಬ ನಿಂದಿಸಿ ಬೆದರಿಕೆ ಹಾಕಿದ್ದಾನೆ. ಈ ಕಾರಣದಿಂದ ಕರೆ ಮಾಡಿ ಬೆದರಿಕೆಯೊಡ್ಡಿದ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೊಯ್ದಿನ್ ಬಾವ ಅವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಈಟಿವಿ ಭಾರತದ ಜೊತೆಗೆ ಮಾತನಾಡಿದ ಅವರು, ಪ್ರತಿವರ್ಷ ನವರಾತ್ರಿ ಸಂದರ್ಭದಲ್ಲಿ ಸುಂಕದಕಟ್ಟೆ ಆಡಳಿತ ಮಂಡಳಿಯವರು ಆಮಂತ್ರಣ ನೀಡುತ್ತಾರೆ. ಈ ವರ್ಷವು ಆಮಂತ್ರಣ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ್ದೆ. ನಾನು ಹೋಗುವ ಸಂದರ್ಭದಲ್ಲಿ ಕೊಪ್ಪರಿಗೆಗೆ ಅಕ್ಕಿ ಹಾಕುವ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಅಲ್ಲಿಯವರ ವಿನಂತಿ ಮೇರೆಗೆ ಜಾತ್ಯಾತೀತ ನೆಲೆಯಲ್ಲಿ ಈ ಕಾರ್ಯದಲ್ಲಿ ಭಾಗಿಯಾಗಿದ್ದೆ. ಇದನ್ನು ಮುಂದಿಟ್ಟುಕೊಂಡು ಬೆದರಿಕೆ ಕರೆ ಮಾಡಲಾಗಿದ್ದು ಈ ಕಾರಣದಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.