ಕರ್ನಾಟಕ

karnataka

ETV Bharat / state

ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ, ಬೆದರಿಕೆ : ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು - ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಬೆದರಿಕೆ

ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಅಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಕೆಲಸಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದ ವ್ಯಕ್ತಿಯ ಮೇಲೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Bantwal Taluk Hospital
ಬಂಟ್ವಾಳ ತಾಲೂಕು ಆಸ್ಪತ್ರೆ

By

Published : Jul 10, 2021, 5:01 PM IST

ಬಂಟ್ವಾಳ : ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈ ಮಾಡಿ ನಿಂದಿಸಿ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದೆ.

ಉಮ್ಮರ್ ಫಾರೂಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈತನ ಪತ್ನಿ ಬಂಟ್ವಾಳ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಒಳರೋಗಿಯಾಗಿ ದಾಖಲಾಗಿದ್ದರು. ಈ ವೇಳೆ ರಾತ್ರಿ ಸರಿಸುಮಾರು 11 ಗಂಟೆ ವೇಳೆಗೆ ಹೆಂಡತಿಯನ್ನು ನೋಡಬೇಕೆಂದು ಫಾರೂಕ್ ಕೇಳಿದ್ದಾನೆ. ಆದರೆ, ಆಸ್ಪತ್ರೆ ಸಿಬ್ಬಂದಿ ರಾತ್ರಿ ಸಮಯದಲ್ಲಿ ಮಹಿಳೆಯರ ವಾರ್ಡ್​​​ಗೆ ಹೋಗಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದರೂ ಫಾರೂಕ್ ಸಿಬ್ಬಂದಿಯನ್ನು ದೂಡಿ ಒಳಗೆ ಹೋಗಿದ್ದಾನೆ.

ಬಳಿಕ ಸಿಬ್ಬಂದಿ ಕರ್ತವ್ಯ ನಿರತ ವೈದ್ಯರಿಗೆ ವಿಷಯ ತಿಳಿಸಿದ್ದಾರೆ. ವಾರ್ಡ್​ ಬಳಿ ಬಂದ ವೈದ್ಯರು ರಾತ್ರಿ ಸಮಯದಲ್ಲಿ ಹೆರಿಗೆ ವಾರ್ಡ್​ಗೆ ಹೋಗಲು ಅವಕಾಶ ಇರುವುದಿಲ್ಲ ಎಂದೇಳಿದ್ದಾರೆ. ಆದರೆ, ಆರೋಪಿ ವೈದ್ಯರಿಗೆ ನಿಂದಿಸಿ ದೂಡಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಆಸ್ಪತ್ರೆ ಅಧಿಕಾರಿಗಳು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details