ಕೊಣಾಜೆ(ದ.ಕನ್ನಡ):ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಣಾಜೆ ಪೋಲಿಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ಹಿತೇಶ್ ಶೆಟ್ಟಿ, ಶರತ್ ಗಟ್ಟಿ ಹಾಗೂ ಚಿತ್ತರಂಜನ್ ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಕೊಣಾಜೆ ಪೇಟೆಯಲ್ಲಿ ಅಂಗಡಿಗೆ ಬಂದಿದ್ದ 12 ವರ್ಷ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಪೊಲೀಸರು ಆರೋಪಿ ಉಸ್ಮಾನ್ ಎಂಬಾತನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಆದರೆ ಪೊಲೀಸರ ಬಂಧನಕ್ಕೆ ಮುಂಚೆ ಈ ಮೂವರು ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿದೂರು ದಾಖಲಾಗಿತ್ತು.