ಮಂಗಳೂರು: ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ಬಳಿ ಮೂರು ಕಾಗೆಗಳ ಕಳೇಬರ ಪತ್ತೆಯಾಗಿದ್ದು, ಹಕ್ಕಿಜ್ವರದ ಭೀತಿ ಎದುರಾಗಿದೆ.
ಪಚ್ಚನಾಡಿ ಡಂಪಿಂಗ್ ಯಾರ್ಡ್ ಸಮೀಪದಲ್ಲಿರುವ ಸ್ಮಶಾನಕ್ಕೆ ತೆರಳುವ ದಾರಿಯಲ್ಲಿ ಕಾಗೆಗಳ ಕಳೇಬರ ಇಂದು ಬೆಳಗ್ಗೆ ಪತ್ತೆಯಾಗಿವೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಕಾಗೆಗಳ ದೇಹದ ಮಾದರಿಯನ್ನು ಸಂಗ್ರಹಿಸಿ ಬೆಂಗಳೂರಿನ ಲ್ಯಾಬ್ಗೆ ಕಳುಹಿಸಿದ್ದಾರೆ.