ಸುಳ್ಯ (ದಕ್ಷಿಣಕನ್ನಡ):ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಜೂನ್ 29, 30 ಮತ್ತು ಜುಲೈ 1ರಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವುದಾಗಿ ಸುಳ್ಯದ ರೈತ ನಾಯಕರು ತಿಳಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆಗೆ ನಿರ್ಧಾರ - ದಕ್ಷಿಣಕನ್ನಡ ಜಿಲ್ಲೆ ಸುಳ್ಯ
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಜೂನ್ 29, 30 ಮತ್ತು ಜುಲೈ 1ರಂದು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಸುಳ್ಯದ ರೈತ ನಾಯಕರು ತಿಳಿಸಿದ್ದಾರೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೂರು ದಿನಗಳ ಕಾಲ ಪ್ರತಿಭಟನೆಗೆ ನಿರ್ಧಾರ
ಸುಳ್ಯದ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೊಳಿಸಿದರೆ ರೈತರು ಸರ್ವನಾಶವಾಗುತ್ತದೆ. ಇದರ ವಿರುದ್ಧ ರಾಜ್ಯದ ಜನರು ಒಗ್ಗಟ್ಟಾಗಿ ಹೋರಾಟ ನಡೆಸಬೇಕು. ಇದಕ್ಕೆ ಸಮಾನ ಮನಸ್ಕರೆಲ್ಲರೂ ಬೆಂಬಲ ನೀಡಬೇಕು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲೂಕು ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು, ಅಧ್ಯಕ್ಷ ಲೋಲಾಕ್ಷ ಭೂತಕಲ್ಲು, ತೀರ್ಥರಾಮ ಪರ್ನೋಜಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.