ಮಂಗಳೂರು:ದ.ಕ.ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದೀಗ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಇಂದು ಒಂದೇ ಕೊರೊನಾ ಸೋಂಕಿನಿಂದ ಒಟ್ಟು ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ.
ದ.ಕ.ಜಿಲ್ಲೆಯಲ್ಲಿ ಒಂದೇ ದಿನ ಮೂವರನ್ನು ಬಲಿ ಪಡೆದ ಕೊರೊನಾ - three deaths due to corona in dakshin kannada
ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಗುಲಿದ್ದ 51 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಂದು ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೊನಾಗೆ ಬಲಿಯಾಗಿದ್ದಾರೆ.
ಕ್ಷಯ ರೋಗದ ಹಿನ್ನೆಲೆಯಲ್ಲಿ ಸುರತ್ಕಲ್ ಜೋಕಟ್ಟೆಯ 51 ವಯಸ್ಸಿನ ಮಹಿಳೆಯನ್ನು ಸುರತ್ಕಲ್ ಸಮೀಪದ ಕಾನದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಬಹಳಷ್ಟು ಬಿಗಡಾಯಿಸಿದ ಪರಿಣಾಮ ಜೂ.26ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಅವರ ಗಂಟಲು ದ್ರವ ತಪಾಸಣೆಯ ವರದಿ ಲಭ್ಯವಾಗಿದ್ದು, ಅವರಲ್ಲಿ ಸೋಂಕು ದೃಢಗೊಂಡಿತ್ತು. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಕ್ಷಯ ರೋಗದಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳದ 57 ವರ್ಷದ ವೃದ್ಧೆ ಹಾಗೂ 31 ವರ್ಷದ ಯುವಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು.
TAGGED:
ದ.ಕ.ಜಿಲ್ಲೆಯಲ್ಲಿ ಮೂವರು ಸಾವು