ಮಂಗಳೂರು:ತಡರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ತಂಡವೊಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉರ್ವ ಠಾಣೆ ಪೊಲೀಸರು ನೈಟ್ ರೌಂಡ್ ಮಾಡುತ್ತಿದ್ದ ವೇಳೆ ಚಿಲಿಂಬಿ ಗುಡ್ಡದಲ್ಲಿ ಯುವಕರ ತಂಡವೊಂದು ಸಾರ್ವಜನಿಕ ಸ್ಥಳದಲ್ಲೇ ಮದ್ಯ ಸೇವನೆ ಮಾಡುತ್ತಿತ್ತು. ಈ ಬಗ್ಗೆ ವಿಚಾರಿಸುತ್ತಿದ್ದ ವೇಳೆ ಕೆಲ ಯುವಕರು ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ತಪ್ಪಿಸಿಕೊಂಡಿದ್ದಾರೆ.