ಕರ್ನಾಟಕ

karnataka

ETV Bharat / state

ಮಂಗಳೂರು: ಹಾಸ್ಟೆಲ್​ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ - students escaped from a college hostel

ನಗರದ ಮೇರಿ ಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರ ಹಾಸ್ಟೆಲ್​ನ ಮೂವರು ವಿದ್ಯಾರ್ಥಿನಿಯರು ಪರಾರಿಯಾಗಿದ್ದಾರೆ.​

students escaped from a college hostel
ಹಾಸ್ಟೆಲ್​ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ

By

Published : Sep 21, 2022, 1:06 PM IST

Updated : Sep 21, 2022, 1:44 PM IST

ಮಂಗಳೂರು:ಇಲ್ಲಿನ ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್​ನಿಂದ ಮೂವರು ವಿದ್ಯಾರ್ಥಿನಿಯರು ಪರಾರಿಯಾಗಿರುವ ಘಟನೆ ನಡೆದಿದೆ. ನಗರದ ಮೇರಿಹಿಲ್ ಏರ್‌ಪೋರ್ಟ್ ರಸ್ತೆಯಲ್ಲಿ ಈ ಕಾಲೇಜ್​ ಇದ್ದು, ವಿದ್ಯಾರ್ಥಿನಿಯರು ಹಾಸ್ಟೆಲ್​ ಕಿಟಕಿ ಮುರಿದಿದ್ದಾರೆ.

ಹಾಸ್ಟೆಲ್​ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ

ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ಗೊತ್ತಾಗಿದೆ. ವಿದ್ಯಾರ್ಥಿನಿಯರು ಪಿಯುಸಿ ಓದುತ್ತಿದ್ದಾರೆ. "ನಾವು ಹೋಗುತ್ತಿದ್ದೇವೆ, ಕ್ಷಮಿಸಿ" ಎಂದು ಚೀಟಿ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ.

ಕಂಕನಾಡಿ ನಗರ ಠಾಣಾ ಪೊಲೀಸರು ಪರಿಶೀಲನೆ ‌ನಡೆಸುತ್ತಿದ್ದಾರೆ.

ಇದನ್ನೂ ಓದಿ:ಮಂಗಳೂರು: ಸಮಾಜಸೇವೆ ಹೆಸರಿನಲ್ಲಿ ಅಪರಾಧ ಕೃತ್ಯ; ಆರೋಪಿಯ ಬಂಧನ!

Last Updated : Sep 21, 2022, 1:44 PM IST

ABOUT THE AUTHOR

...view details