ಮಂಗಳೂರು: ಕೋವಿಡ್ -19 ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ 95 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 95 ಜನರ ಗಂಟಲು ದ್ರವ ಪರೀಕ್ಷೆಗೆ ರವಾನೆ ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 214 ಜನರ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 213 ಜನರ ವರದಿ ನೆಗೆಟಿವ್ ಬಂದಿದ್ದು, ಓರ್ವ ಮಹಿಳೆಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಅಲ್ಲದೆ 39 ಜನರ ಮೇಲೆ ನಿಗಾವಹಿಸಲಾಗಿದೆ.
15 ಜನರನ್ನು ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, 50 ಜನರನ್ನು ಸುರತ್ಕಲ್ ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ ನಲ್ಲಿ ಯಾರೂ ಇಲ್ಲ. 6,073 ಜನರು 28 ದಿನಗಳ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 65 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ದ.ಕ. ಜಿಲ್ಲೆಯಲ್ಲಿ ಈವರೆಗೆ 39,355 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ.
ಈವರೆಗೆ 1,615 ಜನರ ಗಂಟಲು ದ್ರವ ಪಡೆಯಲಾಗಿದ್ದು, 1,239 ಜನರ ವರದಿ ಬಂದಿದೆ. ಅದರಲ್ಲಿ 1,222 ನೆಗೆಟಿವ್ ವರದಿ ಬಂದಿದ್ದರೆ, 17 ಜನರಲ್ಲಿ ಸೋಂಕು ದೃಢವಾಗಿದೆ. 13 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮೂರು ಜನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.