ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ.
ಬಾಂಬ್ ಪತ್ತೆ ಪ್ರಕರಣ: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಬಿಗಿ ಪೊಲೀಸ್ ಭದ್ರತೆ - ಮಂಗಳೂರಲ್ಲಿ ಬಾಂಬ್ ಪತ್ತೆ ಪ್ರಕರಣ
ಸುಬ್ರಹ್ಮಣ್ಯದ ಪ್ರವೇಶದ್ವಾರದಲ್ಲಿ ಸುಬ್ರಹ್ಮಣ್ಯ ಪೊಲೀಸರು ನಿಯೋಜನೆಗೊಂಡಿದ್ದು, ದೇವಾಲಯದ ಒಳಹೋಗುವ ಭಕ್ತರನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ.

ದೇವಾಲಯದಲ್ಲಿ ಪೊಲೀಸರಿಂದ ತಪಾಸಣೆ
ಮಂಗಳವಾರದಿಂದಲೇ ದೇವಾಲಯದ ಎಲ್ಲಾ ಪ್ರವೇಶದ್ವಾರದಲ್ಲಿ ಸುಬ್ರಹ್ಮಣ್ಯ ಪೊಲೀಸರು ನಿಯೋಜನೆಗೊಂಡಿದ್ದು, ದೇವಾಲಯದ ಒಳಹೋಗುವ ಭಕ್ತರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ಪ್ರವಾಸಿಗರ ಕೈಯಲ್ಲಿರುವ ಬ್ಯಾಗ್ಗಳನ್ನು ಪರಿಶೀಲಿಸಲಾಗುತ್ತಿದೆ.
ಕುಕ್ಕೆ ದೇಗುಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ವಾಹನ ಮತ್ತು ಜನರ ಚಲನವಲನಗಳ ಮೇಲೂ ಸಿಬ್ಬಂದಿ ನಿಗಾವಹಿಸಿದ್ದಾರೆ.
Last Updated : Jan 22, 2020, 5:16 PM IST