ಬಂಟ್ವಾಳ (ದಕ್ಷಿಣಕನ್ನಡ): ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು ಮನೆ ಮೇಲೆಯೇ ಉರುಳಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ನಡೆದಿದೆ.
ಟಿಪ್ಪರ್ ಲಾರಿ ಉರುಳಿ ಬಿದ್ದಿದ್ದರಿಂದ ನಾರಾಯಣ ಭಂಡಾರಿ ಎಂಬುವವರ ಮನೆ ಜಖಂಗೊಂಡಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಟಿಪ್ಪರ್ ಲಾರಿಯಡಿ ಸಿಲುಕಿದ್ದ ವಿಠಲ್ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.