ಮಂಗಳೂರು:ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ದ.ಕ.ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ನೂರು ಪ್ರತಿಶತ ಪೂರ್ಣಗೊಳಿಸಬೇಕು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಜನವರಿ, ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಪ್ರಸ್ತುತ ಅನುಮೋದನೆಗೆ ಸಲ್ಲಿಸಿರುವ 80 ಕಾಮಗಾರಿಗಳನ್ನು ಮಾರ್ಚ್ ಎರಡನೇ ವಾರದೊಳಗಾಗಿ ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.