ಉಳ್ಳಾಲ:ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆಯಲ್ಲೇ ವ್ಯಕ್ತಿಯೋರ್ವರಿಗೆ ಹೃದಯಾಘಾತ ಆಗಿರುವ ಘಟನೆ ತೊಕ್ಕೊಟ್ಟು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪಿನಲ್ಲಿ ನಡೆದಿದೆ.
ಪುತ್ತೂರು ಮೂಲದ ಅಭಿಷೇಕ್ (43) ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ. ಅಭಿಷೇಕ್ ಕುಟುಂಬದವರೊಂದಿಗೆ ಕಲ್ಲಾಪಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮಹಿಳಾ ವೈದ್ಯೆ, ಅಭಿಷೇಕ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.