ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) ಜು.23ರಂದು ರಜೆ ಘೋಷಿಸಲಾಗಿದೆ.
ಮಳೆ ಹಿನ್ನೆಲೆ ದ.ಕ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ - undefined
ಕಳೆದ ಎರಡು ದಿನಗಳಿಂದ ದ.ಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶಾಲಾ ಕಾಲೇಜುಗಳಿಗೆ ರಜೆ ಆದೇಶ ನೀಡಿದ್ದು, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಇನ್ನೂ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಖಚಿತವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಉಚಿತ ತುರ್ತು ಸೇವೆ ಸಂಖ್ಯೆಗೆ ಕರೆ ಮಾಡಬೇಕು, ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಂಗೆ ಸಂಪರ್ಕಿಸಬಹುದೆಂದು ಎಂದು ಸೂಚಿಸಿದ್ದಾರೆ.