ಮಂಗಳೂರು: ಟಿಬೇಟಿಯನ್ ಆಧ್ಯಾತ್ಮಿಕ ಗುರು ದಲಾಯಿಲಾಮ ಅಖಿಲ ಭಾರತ ಕ್ಯಾಥೋಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ನಾಳೆ ಕುಡ್ಲಕ್ಕೆ ದಲಾಯಿಲಾಮ ಭೇಟಿ ಹಿನ್ನೆಲೆ ಟೈಟ್ ಸೆಕ್ಯುರಿಟಿಗೆ ವ್ಯವಸ್ಥೆ: ಡಿಸಿ ಸಸಿಕಾಂತ್ ಸೆಂಥಿಲ್
ಟಿಬೆಟ್ ಧರ್ಮಗುರು ದಲಾಯಿಲಾಮ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಹಿನ್ನಲೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್ ತಿಳಿಸಿದ್ದಾರೆ.
ದಲಾಯಿಲಾಮ ಆಗಮನದ ಹಿನ್ನೆಲೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.
ದಲಾಯಿಲಾಮ ಮಂಗಳೂರಿನಲ್ಲಿ ಇರುವಷ್ಟು ಸಮಯ ಅವರ ಉಳಿದು ಕೊಳ್ಳುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗುತ್ತಿದೆ. ನಮ್ಮಲ್ಲಿ ಟಿಬೆಟಿಯನ್ ಮಕ್ಕಳು ಬಹಳಷ್ಟು ಮಂದಿ ಇದ್ದು, ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಗಸ್ಟ್ 30ರಂದು ಕಾರ್ಯಕ್ರಮದಲ್ಲಿ ಭಾಗವಹಿಸಿ 31ರಂದು ಅವರು ನಗರದಿಂದ ತೆರಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.