ಮಂಗಳೂರು: ಕೊರೊನಾ ವೈರಸ್ ಜಗತ್ತಿನಾದ್ಯಂತ ಪಸರಿಸುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮೂಡಬಿದಿರೆ ಜೈನ್ ಬಸದಿಗೆ ವಿದೇಶಿ ಪ್ರವಾಸಿಗರ ಆಗಮನವನ್ನು ಕೆಲವು ದಿನಗಳ ಮಟ್ಟಿಗೆ ನಿರ್ಬಂಧಿಸಲಾಗಿದೆ ಎಂದು ಮೂಡಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕರ ಸ್ವಾಮೀಜಿ ತಿಳಿಸಿದರು.
ಕೊರೊನ ವೈರಸ್ ಆತಂಕ: ಮೂಡುಬಿದಿರೆಗೆ ವಿದೇಶ ಪ್ರವಾಸಿಗರ ಆಗಮನ ಮುಂದೂಡಿಕೆ - ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣ
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಬಿದಿರೆ ಜೈನ್ ಬಸದಿಗೆ ವಿದೇಶಿ ಪ್ರವಾಸಿಗರ ಆಗಮನವನ್ನು ಕೆಲವು ದಿನಗಳ ಮಟ್ಟಿಗೆ ನಿರ್ಬಂಧಿಸಲಾಗಿದೆ ಎಂದು ಮೂಡಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕರ ಸ್ವಾಮೀಜಿ ತಿಳಿಸಿದರು.
ಮಾರ್ಚ್ನಿಂದ ಮೇ ತಿಂಗಳವರೆಗೆ ವಿಶ್ವದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಪ್ರವಾಸಿಗರು ಪ್ರತಿ ವರ್ಷವೂ ಆಗಮಿಸುವುದು ಸಾಮಾನ್ಯ. ಇಲ್ಲಿನ ಇತಿಹಾಸ ಪ್ರಸಿದ್ಧ ಸಾವಿರ ಕಂಬದ ಬಸದಿ ಸಹಿತ ವಿವಿಧ ತಾಣಗಳನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿಗರು ಬರುತ್ತಾರೆ. ಆದ್ರೆ ಈ ಬಾರಿ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಮ್ಮ ಪ್ರವಾಸವನ್ನು ಮುಂದೂಡುವಂತೆ ವಿದೇಶಿಗರಿಗೆ ಮನವಿ ಮಾಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕರ್ನಾಟಕ ಸರ್ಕಾರ ಹೊರಡಿಸಿದ ಸುತ್ತೋಲೆಯನ್ನು ಸಾವಿರ ಕಂಬದ ಬಸದಿಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಮೂದಿಸಿ ಸಾರ್ವಜನಿಕರಿಗೆ ಮಾಹಿತಿ ಮುಟ್ಟಿಸುವ ಕೆಲಸವನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.