ಮಂಗಳೂರು: ಪ್ರವಾಸೋದ್ಯಮಕ್ಕೆ ಅನುಕೂಲವಾಗುವ ರೀತಿಯಲ್ಲಿ ನಗರದ ಬೈರಾಡಿ ಕೆರೆಯನ್ನು ಅಭಿವೃದ್ಧಿಗೊಳಿಸಲು ಪ್ರವಾಸೋದ್ಯಮ ಇಲಾಖೆಯಿಂದ ಮೊದಲ ಹಂತದಲ್ಲಿ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಬೈರಾಡಿ ಕೆರೆ ಅಭಿವೃದ್ಧಿಗೆ ಮೊದಲ ಹಂತದಲ್ಲಿ 25 ಲಕ್ಷ ರೂ. ಅನುದಾನ: ಸಚಿವ ಸಿ.ಪಿ.ಯೋಗೇಶ್ವರ್
ಪ್ರವಾಸೋದ್ಯಮ ಇಲಾಖೆಯಿಂದ 25 ಲಕ್ಷ ರೂ. ಅನುದಾನ ವಿನಿಯೋಗಿಸಿ ಬೈರಾಡಿ ಕೆರೆ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು.
ಸಿ.ಪಿ ಯೋಗೇಶ್ವರ್
ನಗರದ ಪಡೀಲ್ನಲ್ಲಿರುವ ಬೈರಾಡಿ ಕೆರೆ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಜನ ವಸತಿ ಪ್ರದೇಶಗಳು ಇರುವಲ್ಲಿ ಕಲ್ಮಶಗಳು ಇರೋದು ಸಾಮಾನ್ಯ. ಈ ಹಿನ್ನೆಲೆ ಬೈರಾಡಿ ಕೆರೆಯನ್ನು ಶುದ್ಧೀಕರಣ ಮಾಡಿ ಕೆರೆಯನ್ನು ಅಭಿವೃದ್ಧಿ ಮಾಡಲಾಗುತ್ತದೆ.
ಒಂದು ಕೆರೆ ಅಭಿವೃದ್ಧಿ ಆದಲ್ಲಿ ಸುತ್ತಮುತ್ತಲಿನ ಪರಿಸರ ಅಭಿವೃದ್ಧಿ ಆಗಲಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನೂರಾರು ಬತ್ತಿ ಹೋಗಿರುವ ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.