ಮಂಗಳೂರು: ದ.ಕ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಪ್ರತಿ ದಿನ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶಿಸಲಾಗಿದೆ.
ಚಾರ್ಮಾಡಿ ಘಾಟ್ನಲ್ಲಿ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ - ಮಂಗಳೂರು
ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮಣ್ಣು ಹಸಿಯಾಗಿ ಕುಸಿಯುವ ಸಾಧ್ಯತೆ ಇದೆ. ರಸ್ತೆಯ ಇಕ್ಕೆಲಗಳಲ್ಲಿ ತಡೆಗೋಡೆಯೂ ಇಲ್ಲದೆ ಮಂಜು ಕವಿದ ವಾತಾವರಣದಿಂದ ಚಾಲಕರಿಗೆ ದಾರಿ ಕಾಣದೆ ಅಪಘಾತಗಳಾಗುವ ಸಾಧ್ಯತೆ ಇದೆ.
ಚಾರ್ಮಾಡಿ ಘಾಟ್
ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮಣ್ಣು ಹಸಿಯಾಗಿ ಕುಸಿಯುವ ಸಾಧ್ಯತೆ ಇದೆ. ರಸ್ತೆಯ ಇಕ್ಕೆಲಗಳಲ್ಲಿ ತಡೆಗೋಡೆಯೂ ಇಲ್ಲದೆ ಮಂಜು ಕವಿದ ವಾತಾವರಣದಿಂದ ಚಾಲಕರಿಗೆ ದಾರಿ ಕಾಣದೆ ಅಪಘಾತಗಳಾಗುವ ಸಾಧ್ಯತೆ ಇದೆ.
ಆದ್ದರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮುಂದಿನ ಆದೇಶದವರೆಗೆ ಪ್ರತಿ ದಿನ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.