ಮಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ಕೇರಳ ರಾಜ್ಯದಿಂದ ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ತಲಪಾಡಿ ಗಡಿ ಮೂಲಕ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ದೊರೆತಿದೆ.
ಕಾಸರಗೋಡು ಗಡಿ ದಾಟಿ ಬರುವವರಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ - Kerala- Karnataka Border Open
ಸುಪ್ರೀಂ ಕೋರ್ಟ್ ಆದೇಶದನ್ವಯ ಕೇರಳ ರಾಜ್ಯದವರಿಗೆ ಮಂಗಳೂರಿನಲ್ಲಿ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ.
ಕೇರಳದವರಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ
ಆದರೆ ಹೀಗೆ ಬರುವ ರೋಗಿಗಳಿಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಾತ್ರ ಚಿಕಿತ್ಸೆ ಪಡೆಯಲು ಜಿಲ್ಲಾಡಳಿತ ಅವಕಾಶ ನೀಡಿದೆ.
ಕೆಲವೊಂದು ಮಾನದಂಡದ ಅನುಗುಣವಾಗಿ ವೈದ್ಯಕೀಯ ಚಿಕಿತ್ಸೆ ನೀಡಲು ದ.ಕ.ಜಿಲ್ಲಾಡಳಿತ ಒಪ್ಪಿಗೆ ನೀಡಿದ್ದು, ಕಾಸರಗೋಡಿನಲ್ಲಿ ಈಗಾಗಲೇ ಬಹಳಷ್ಟು ಮಂದಿ ಕೊರೊನಾ ಸೋಂಕಿತರು ಇರುವುದರಿಂದ, ಅಲ್ಲಿಂದ ಮತ್ತೆ ವೈದ್ಯಕೀಯ ಚಿಕಿತ್ಸೆಗೆಂದು ಯಾರಾದರೂ ನಗರ ಪ್ರವೇಶಿಸಿದಲ್ಲಿ ಕೊರೊನಾ ಸೋಂಕು ಇಲ್ಲಿಯೂ ಹರಡಬಹುದು ಎಂದು ಮುಂಜಾಗ್ರತೆಯಿಂದ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.