ಬಂಟ್ವಾಳ: ಸ್ಕೂಟರ್ಗೆ ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ನಗರದ ಬಿ.ಸಿ.ರೋಡ್ ಸರ್ಕಲ್ ಬಳಿ ನಡೆದಿದೆ.
ಬಂಟ್ವಾಳ: ಲಾರಿ ಡಿಕ್ಕಿ, ಸ್ಕೂಟರ್ ಸವಾರ ಸಾವು - ಲಾರಿ ಡಿಕ್ಕಿ: ಸ್ಕೂಟರ್ ಸವಾರ ಸಾವು
ಬಿ.ಸಿ.ರೋಡ್ ಸರ್ಕಲ್ ಬಳಿ ಮಂಗಳವಾರ ರಾತ್ರಿ ದ್ವಿ ಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಮೃತಪಟ್ಟಿದ್ದಾನೆ.
ಲಾರಿ ಡಿಕ್ಕಿ: ಸ್ಕೂಟರ್ ಸವಾರ ಸಾವು
ರಿತೇಶ್ (30) ಮೃತ ವ್ಯಕ್ತಿ. ಇವರನ್ನು ಪೂಂಜರಕೋಡಿ ನಿವಾಸಿ ಎಂದು ಗುರುತಿಸಲಾಗಿದೆ. ಸ್ಕೂಟರ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರವಾಗಿ ಪೆಟ್ಟಾದ ಕಾರಣ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್ಐ ರಾಜೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.