ಕರ್ನಾಟಕ

karnataka

ETV Bharat / state

ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರ ಕಡೆಗಣನೆ: ಎಂಆರ್‌ಪಿಎಲ್​ಗೆ ಟಿ.ಎಸ್.ನಾಗಾಭರಣ ಪತ್ರ - ನೇಮಕಾತಿಯಲ್ಲಿ ಸ್ಥಳೀಯರ ಕಡೆಗಣನೆ

ಮಂಗಳೂರಿನ ಎಂಆರ್​ಪಿಎಲ್ ಸಂಸ್ಥೆ ರಾಜ್ಯದ ಭೂಮಿ, ನೀರು, ವಿದ್ಯುತ್ ಹಾಗೂ ಮೂಲಭೂತ ಸೌಲಭ್ಯಗಳನ್ನು ಬಳಸಿಕೊಂಡು ನೇಮಕಾತಿ ಸಂದರ್ಭ ಸ್ಥಳೀಯ ಕನ್ನಡಿಗರನ್ನು ಕಡೆಗಣಿಸಿರುವುದು ಅಕ್ಷಮ್ಯ. ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ನೀಡುವಂತೆ ಟಿ.ಎಸ್.ನಾಗಾಭರಣ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಟಿ.ಎಸ್.ನಾಗಾಭರಣ

By

Published : Oct 25, 2019, 6:13 AM IST

ಮಂಗಳೂರು: ಉದ್ಯೋಗಾವಕಾಶ ಒದಗಿಸಲು ನೇಮಕಾತಿ ಪ್ರಕಟಣೆ ಹೊರಡಿಸಿರುವ ಕೇಂದ್ರ ಸ್ವಾಮ್ಯದ ಎಂಆರ್‌ಪಿಎಲ್ (ಮಂಗಳೂರು ರಿಫೈನರಿ ಮತ್ತು ಲಿ.) ಸಂಸ್ಥೆಯ ನೇಮಕಾತಿ ಆದೇಶವನ್ನು ತಡೆಹಿಡಿದು ಸ್ಥಳೀಯ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಎಂಆರ್‌ಪಿಎಲ್ ನಿರ್ದೆಶಕರಿಗೆ ಗುರುವಾರ ಪತ್ರ ಬರೆದು ಸೂಚನೆ ನೀಡಿದ್ದಾರೆ.

ಮಂಗಳೂರಿನಲ್ಲಿರುವ ಎಂಆರ್‌ಪಿಎಲ್ ಸಂಸ್ಥೆ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸಲು ನೇಮಕಾತಿ ಪ್ರಕಟನೆ ಹೊರಡಿಸಿರುವುದು ಸ್ವಾಗತಾರ್ಹ. ಆದರೆ ರಾಜ್ಯದ ಭೂಮಿ, ನೀರು, ವಿದ್ಯುತ್ ಹಾಗೂ ಮೂಲಭೂತ ಸೌಲಭ್ಯಗಳನ್ನು ಬಳಸಿಕೊಂಡು ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಕನ್ನಡಿಗರನ್ನು ಕಡೆಗಣಿಸಿರುವುದು ಅಕ್ಷಮ್ಯ. ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ನೀಡುವಂತೆ ಟಿ.ಎಸ್.ನಾಗಾಭರಣ ಅವರು ಎಂಆರ್ ಪಿಎಲ್ ಸಂಸ್ಥೆಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ವರದಿ ನೀಡುವಂತೆ ಎಂಆರ್‌ಪಿಎಲ್​ಗೆ ಟಿ.ಎಸ್.ನಾಗಾಭರಣ ಪತ್ರ

ತ್ರಿಭಾಷಾ ಸೂತ್ರದನ್ವಯ ಕರ್ನಾಟಕದಲ್ಲಿ ನೆಲೆಸಿರುವ ಎಲ್ಲ ಕೇಂದ್ರ ಸ್ವಾಮ್ಯದ ಉದ್ದಿಮೆಗಳು ಡಾ.ಸರೋಜಿನಿ ಮಹಿಷಿ ವರದಿಯನ್ವಯ ಸ್ಥಳೀಯರಿಗೆ ಆದ್ಯತೆಯ ಮೇಲೆ ಉದ್ಯೋಗಾವಕಾಶ ಕಲ್ಪಿಸಬೇಕಾಗುತ್ತದೆ. ಆದರೆ ಎಂಆರ್‌ಪಿಎಲ್ ಪ್ರಸ್ತುತ ಹೊರಡಿಸಿರುವ ನೇಮಕಾತಿಯಲ್ಲಿ ಸ್ಥಳೀಯ ಕನ್ನಡಿಗರಿಗೆ ಆದ್ಯತೆ ನೀಡಿಲ್ಲ. ನೇಮಕಾತಿ ಪ್ರಕಟನೆಯನ್ನು ತಕ್ಷಣದಿಂದಲೇ ತಡೆಹಿಡಿಯಬೇಕು ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ABOUT THE AUTHOR

...view details