ಬಂಟ್ವಾಳ :ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿಯು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ನೂತನ ತುಂಬೆ ಡ್ಯಾಂನಿಂದ ಮುಳುಗಡೆಯಾದ ಜಮೀನಿಗೆ ಇನ್ನು ಕೆಲವು ರೈತರಿಗೆ ನೆಲ ಬಾಡಿಗೆ ಅಥವಾ ಶಾಶ್ವತ ಭೂ ಪರಿಹಾರ ದೊರೆಯದೇ ಇರುವ ಬಗ್ಗೆ ಮನವಿ ಸಲ್ಲಿಸಿದರು.
ಪರಿಹಾರ ಒದಗಿಸುವ ಭರವಸೆ ಈಡೇರುವಂತೆ ಸಚಿವರಿಗೆ ನೆನಪಿಸಿದ ತುಂಬೆ ಡ್ಯಾಂ ಹೋರಾಟ ಸಮಿತಿ - ಬಂಟ್ವಾಳ ಸುದ್ದಿ
ಕಳೆದ ವಿಧಾನಸಭೆ ಅಧಿವೇಶನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಂತ್ರಸ್ತ ರೈತರಿಗೆ ವರತೆ ಪ್ರದೇಶಕ್ಕೂ ಭೂ ಪರಿಹಾರ ಭರಿಸಬೇಕು ಎಂಬುದಾಗಿ ಸರ್ಕಾರದ ಗಮನ ಸೆಳೆದಾಗ ಕಂದಾಯ ಸಚಿವರು ಭೂ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
ಕಳೆದ ವಿಧಾನಸಭೆ ಅಧಿವೇಶನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸಂತ್ರಸ್ತ ರೈತರಿಗೆ ವರತೆ ಪ್ರದೇಶಕ್ಕೂ ಭೂ ಪರಿಹಾರ ಭರಿಸಬೇಕು ಎಂಬುದಾಗಿ ಸರ್ಕಾರದ ಗಮನ ಸೆಳೆದಾಗ ಕಂದಾಯ ಸಚಿವರು ಭೂ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಆದರೆ, ಈವರೆಗೆ ಅದರ ಅನುಷ್ಠಾನ ಆಗಿರದೇ ಇರುವುದರ ಬಗ್ಗೆ ಸಚಿವರಿಗೆ ತಿಳಿಸಿದರು.
ಈ ವಿಷಯದ ಬಗ್ಗೆ ಶಾಸಕರ ಜೊತೆ ಮಾತನಾಡಿ ರೈತರ ಸಮಸ್ಯೆ ಪರಿಹರಿಸುವುದಾಗಿ ಉಸ್ತುವಾರಿ ಸಚಿವರು ಭರವಸೆ ನೀಡಿದರು. ಇದೇ ವೇಳೆ ತುಂಬೆ ಡ್ಯಾಂ ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ ಸುಬ್ರಹ್ಮಣ್ಯ ಭಟ್, ಪಾಣೆ ಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಜಯಕರ್ನಾಟಕ ಜಿಲ್ಲಾ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಉಪಸ್ಥಿತರಿದ್ದರು.