ಕರ್ನಾಟಕ

karnataka

ETV Bharat / state

ತೌಕ್ತೆ ಚಂಡಮಾರುತದ ಎಫೆಕ್ಟ್: ಮಂಗಳೂರಿನಲ್ಲಿ ಕಡಲು ಪ್ರಕ್ಷುಬ್ಧ - ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ

ತೌಕ್ತೆ ಚಂಡಮಾರುತ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಅಲ್ಲದೇ ಸಮುದ್ರ ಪ್ರಕ್ಷುಬ್ಧಗೊಂಡಿದೆ.

Turbulent sea in Mangalore
ಮಂಗಳೂರಿನಲ್ಲಿ ಕಡಲು ಪ್ರಕ್ಷುಬ್ಧ

By

Published : May 15, 2021, 10:59 AM IST

ಮಂಗಳೂರು:ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಕಾಣಿಸಿಕೊಂಡ ಪರಿಣಾಮ ಮಂಗಳೂರಿನಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.

ಮಂಗಳೂರಿನಲ್ಲಿ ಕಡಲು ಪ್ರಕ್ಷುಬ್ಧ

ತೌಕ್ತೆ ಚಂಡಮಾರುತ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿತ್ತು. ಅದರಂತೆ ನಿನ್ನೆ ರಾತ್ರಿಯಿಂದಲೇ ಮಳೆ ಸುರಿಯುತ್ತಿದೆ. ಆದರೆ ಮಂಗಳೂರಿನ ಅರಬ್ಬಿ ಸಮುದ್ರದ ತೀರದಲ್ಲಿ ನಿನ್ನೆಯಿಂದಲೇ ಕಡಲು ಪ್ರಕ್ಷುಬ್ಧಗೊಂಡಿದೆ. ಸಮುದ್ರ ತೀರಕ್ಕೆ ಭಾರೀ ಗಾತ್ರದ ಅಲೆಗಳು ಬಂದು ಅಪ್ಪಳಿಸುತ್ತಿವೆ.

ತೌಕ್ತೆ ಚಂಡಮಾರುತದ ಪರಿಣಾಮ ಮೀನುಗಾರರು ಕಡಲಿಗಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಎರಡು ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿರುವವರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ಸಮುದ್ರ ತೀರಕ್ಕೆ ಮರಳಿ ಹೋಗುವಂತೆ ಸೂಚಿಸಿದ್ದರು.

ABOUT THE AUTHOR

...view details