ಕರ್ನಾಟಕ

karnataka

ETV Bharat / state

ಸಚಿವ ಕೋಟ ಶ್ರೀನಿವಾಸ ಪೂಜಾರಿ -ಮಾಜಿ ಸಚಿವ ಯುಟಿ ಖಾದರ್ ನಡುವೆ ಟ್ವೀಟ್ ವಾರ್ - Mangalore

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರ ವರ್ಗಾವಣೆ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಮಾಜಿ ಸಚಿವ ಯುಟಿ ಖಾದರ್ ನಡುವೆ ಟ್ವೀಟ್ ವಾರ್ ಮುಂದುವರಿದಿದೆ.

Mangalore
ಕೋಟ ಶ್ರೀನಿವಾಸ ಪೂಜಾರಿ ಮತ್ತು ಯುಟಿ ಖಾದರ್ ನಡುವೆ ಟ್ವೀಟ್ ವಾರ್

By

Published : Jul 30, 2020, 12:32 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರ ವರ್ಗಾವಣೆ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಮಾಜಿ ಸಚಿವ ಯುಟಿ ಖಾದರ್ ನಡುವೆ ಟ್ವೀಟ್ ವಾರ್ ಮುಂದುವರಿದಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ವರ್ಗಾವಣೆಗೆ ಸಂಬಂಧಿಸಿದಂತೆ ಮೊದಲು ಟ್ವೀಟ್ ಮಾಡಿದ ಮಾಜಿ ಸಚಿವ ಯುಟಿ ಖಾದರ್ , ಜಿಲ್ಲಾಧಿಕಾರಿಗೆ ಬಂದ ಜೀವ ಬೆದರಿಕೆ ಕರೆಯ ಹಿನ್ನೆಲೆಯಲ್ಲಿ ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ ನೀಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಕೋಟ ಶ್ರೀನಿವಾಸ ಪೂಜಾರಿ ಮತ್ತು ಯುಟಿ ಖಾದರ್ ನಡುವೆ ಟ್ವೀಟ್ ವಾರ್

ಅಧಿಕಾರಿಗಳಿಗೆ ಬೆದರಿಸಲು, ಹಲ್ಲೆ ಮಾಡಲು, ಗೂಂಡಾಗಿರಿ ಮಾಡಲು ಇದು ಖಾದರ್ ಕಾಲವಲ್ಲ ಎಂದು ಟ್ವೀಟ್ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿತಿರುಗೇಟು ನೀಡಿದ್ದರು.

ಈ ಹೇಳಿಕೆಗೆ ಇದೀಗ ಟ್ವೀಟ್ ಮೂಲಕವೇ ಉತ್ತರಿಸಿದ ಮಾಜಿ ಸಚಿವ ಯು.ಟಿ ಖಾದರ್ , ನೀವು ಬಂದ ಒಂದೇ ವರ್ಷದಲ್ಲಿ ಇಬ್ಬರು ಜಿಲ್ಲಾಧಿಕಾರಿಗಳು ಅಪಮಾನಕ್ಕೀಡಾಗಿ ವಾಪಾಸ್ ಹೋಗಿದ್ದಾರೆ. ನಮ್ಮ ಕಾಲದಲ್ಲಿ ನಾನೇ ಅಧಿಕಾರ ಚಲಾಯಿಸಿದ್ದೆ. ಈಗ ಕಾಲ ನಿಮ್ಮದಿದ್ದರೂ ಅಧಿಕಾರ ಮಾತ್ರ ಬೇರೆಯವರ ಕೈಯಲ್ಲಿದೆಯಲ್ಲಾ ಎಂದು ಟಾಂಗ್ ನೀಡಿದ್ದಾರೆ.

ABOUT THE AUTHOR

...view details