ಕರ್ನಾಟಕ

karnataka

ETV Bharat / state

ಲಾರಿ-ಸ್ಕೂಟರ್ ಡಿಕ್ಕಿ ಕೇಸ್​... ಬೈಕ್​ ಸವಾರನ ಸಾವು ಪ್ರಕರಣಕ್ಕೆ ಟ್ವಿಸ್ಟ್ - Twist to the Accident case of kadaba

ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರ ಸಂಭವಿಸಿದ ಲಾರಿ ಹಾಗೂ ಸ್ಕೂಟಿ ನಡುವೆ ಅಪಘಾತದಲ್ಲಿ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದೆ.

kadaba
ಲಾರಿ-ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಸಾವು ಪ್ರಕರಣಕ್ಕೆ ಟ್ವಿಸ್ಟ್..!

By

Published : Mar 1, 2020, 11:49 PM IST

ಕಡಬ(ದಕ್ಷಿಣ ಕನ್ನಡ): ಲಾರಿ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಭಾನುವಾರ ಸಂಭವಿಸಿದೆ. ಈ ಪ್ರಕರಣ ಇದೀಗ ತಿರುವು ಪಡೆಯುತ್ತಿದೆ.

ಡಿಕ್ಕಿಯಾದ ನಂತರ ಲಾರಿಯಲ್ಲಿದ್ದ ಮರಳು ಖಾಲಿ ಮಾಡಿ ವಾಪಸ್​ ತಂದಿರಿಸಿದ್ದಾರೆ ಎಂಬ ಸುದ್ದಿ ಹಬ್ಬಿದ್ದು, ಪ್ರಕರಣದಲ್ಲಿ ಪೊಲೀಸರ ದಿಕ್ಕು ತಪ್ಪಿಸಿದ್ದಾರೆ ಎಂಬ ಅನುಮಾನ ಮೂಡಿದೆ.

ಲಾರಿ-ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಸಾವು ಪ್ರಕರಣಕ್ಕೆ ಟ್ವಿಸ್ಟ್..!

ಅಕ್ರಮ ಮರಳು ಸಾಗಣೆಯ ಕೇರಳ ನೋಂದಣಿಯ ಮಿನಿ ಲಾರಿ (407) ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಟೈಲ್ಸ್ ಅಳವಡಿಸುವ ಕಾರ್ಮಿಕ ರಾಜಸ್ಥಾನ ಮೂಲದ ಮೇಘರಾಜ (32) ಸ್ಥಳದಲ್ಲೇ ಮೃತಪಟ್ಟ ಘಟನೆ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ದೇವಸ್ಥಾನದ ಬಳಿ ಮಾ.1(ಭಾನುವಾರ) ಮಧ್ಯಾಹ್ನ ಸಂಭವಿಸಿದೆ.

ಕೋಡಿಂಬಾಳ ಗ್ರಾಮದ ಮುಳಿಯ ಹೊನ್ನಪ್ಪ ಗೌಡರ ಎಂಬುವರ ಹೊಸ ಮನೆಯ ಟೈಲ್ಸ್ ಅಳವಡಿಸುವ ಕೆಲಸ ಮಾಡಿಕೊಂಡಿದ್ದ ಮೇಘರಾಜನು ಹೊನ್ನಪ್ಪ ಗೌಡರ ಸ್ಕೂಟರ್​ನಲ್ಲಿ ಪೈಂಟ್ ತರಲೆಂದು ಕಡಬಕ್ಕೆ ಹೋಗಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದ ವೇಳೆ ಲಾರಿಯ ಹಿಂಬದಿ ಚಕ್ರ ಅವನ ತಲೆಯ ಮೇಲೆ ಹರಿದ ಪರಿಣಾಮ ಆತನ ತಲೆ ಪೂರ್ತಿ ಛಿದ್ರವಾಗಿದೆ. ಸ್ಥಳಕ್ಕೆ ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಳು ಖಾಲಿ ಮಾಡಿ ಲಾರಿ ತಂದಿರಿಸಿದ ಆರೋಪ

ಲಾರಿ-ಸ್ಕೂಟರ್ ಡಿಕ್ಕಿ ಹೊಡೆದು ಸವಾರ ಸಾವು ಪ್ರಕರಣಕ್ಕೆ ಟ್ವಿಸ್ಟ್..!

ಅಪಘಾತ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳುವ ಮೊದಲು ಲಾರಿಯಲ್ಲಿದ್ದ ಮರಳನ್ನು ಅಪಘಾತ ನಡೆದ ಸ್ಥಳದ ಸಮೀಪ ಮನೆಯೊಂದರ ಬಳಿ ಖಾಲಿ ಮಾಡಿ ಲಾರಿಯನ್ನು ಮತ್ತೆ ಅಪಘಾತದ ಸ್ಥಳದಲ್ಲಿ ತಂದಿರಿಸಿದರು ಎಂದು ಸ್ಥಳೀಯರು ದೂರಿದ್ದಾರೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದಕ್ಕೆ ಪೂರಕವಾಗಿ ಲೋಡ್ ಲಾರಿಯ ಚಿತ್ರ ಇದೀಗ ಲಭ್ಯವಾಗಿದೆ. ಪೊಲೀಸರು ಸ್ಥಳಕ್ಕೆ ಬರುವ ಮೊದಲು ಅಪಘಾತಕ್ಕೆ ಕಾರಣವಾಗಿದ್ದ ವಾಹನವನ್ನು ಸ್ಥಳಾಂತರಿಸಿ ಮತ್ತೆ ತಂದಿರಿಸಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಿದಂತಾಗಿದೆ ಎಂಬ ಆರೋಪ ಕೇಳಿಬಂದಿದೆ.

ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದರೂ ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಮೇಲೆ ಆತನ ತಲೆಯ ಮೇಲೆ ಲಾರಿಯ ಚಕ್ರ ಹರಿದಿದೆ ಎಂದು ಪೊಲೀಸರು ದಾಖಲಿಸಿಕೊಂಡಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ABOUT THE AUTHOR

...view details