ಮಂಗಳೂರು: ಲಾಡ್ಜ್ ನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಮಂಗಳೂರಿನ ಬಂದರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್ ದಂಧೆ: ಇಬ್ಬರ ಬಂಧನ, ಐವರು ಪರಾರಿ - Manglure IPL betting case accused arrest news
ಮಂಗಳೂರಿನ ಪಿ ಎಂ ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
Manglure
ಮಂಗಳೂರಿನ ಹರಿಪ್ರಸಾದ್ ಮತ್ತು ಶಶಿಧರ ಬಂಧಿತರು. ಮಂಗಳೂರಿನ ಪಿ ಎಂ ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ಐವರು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇನ್ನು ಬಂಧಿತರಿಂದ 1.20 ಲಕ್ಷ ರೂಪಾಯಿ ನಗದು, 6 ಮೊಬೈಲ್ ಫೋನ್ ಮತ್ತು ಒಂದು ಟಿವಿಯನ್ನು ವಶಪಡಿಸಿಕೊಂಡಿದ್ದಾರೆ.