ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ. ಅನ್ಯಕೋಮಿನ ಯುವತಿಯರಿಬ್ಬರು ಕಾರಿನಲ್ಲಿದ್ದಾರೆ ಎಂದು 8 ಜನರ ತಂಡವೊಂದು ದಾಳಿ ನಡೆಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಇಬ್ಬರು ಆರೋಪಿಗಳು ಅಂದರ್ - ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಇಬ್ಬರ ಬಂಧನ
ಅನ್ಯಕೋಮಿನ ಇಬ್ಬರು ಯುವತಿಯರು ಕಾರಿನಲ್ಲಿದ್ದಾರೆ ಎಂದು ಎಂಟು ಜನರ ತಂಡವೊಂದು ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮೂಡಬಿದಿರೆ ತಾಲೂಕಿನ ಹೊರವಲಯದಲ್ಲಿ ಮಾರುತಿ ಆಲ್ಟೋ ಕಾರಿನಲ್ಲಿ ಓರ್ವ ವ್ಯಕ್ತಿ ಹಾಗೂ ಆತನ ಪತ್ನಿ ಹಾಗೂ ಇಬ್ಬರು ಅನ್ಯಕೋಮಿನ ಯುವತಿಯರು ಪ್ರಯಾಣ ಬೆಳೆಸಿದ್ದರು. ಅನ್ಯಕೋಮಿನ ಇಬ್ಬರು ಯುವತಿಯರು ಕಾರಿನಲ್ಲಿದ್ದಾರೆಂಬ ಮಾಹಿತಿ ಪಡೆದುಕೊಂಡ ಎಂಟು ಜನರ ತಂಡವೊಂದು ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದೆ.
ದಾಳಿ ನಡೆಸಿದ ತಂಡ ಕಾರಿನಲ್ಲಿದ್ದವರೊಂದಿಗೆ ಅಗೌರವ ರೀತಿಯಲ್ಲಿ ವರ್ತಿಸಿದೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಮೂಡುಬಿದಿರೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ 354, 153a, 504, 506 ಕಲಂ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.