ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ.. ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಬಜರಂಗದಳ ಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

two-arrested-in-moral-policing-case-in-mangaluru
ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ... ಇಬ್ಬರು ಬಜರಂಗದಳ ಕಾರ್ಯಕರ್ತರ ಬಂಧನ

By

Published : Oct 7, 2021, 11:41 AM IST

ಮಂಗಳೂರು:ನಗರದ ಸೈಂಟ್ ಆಗ್ನೆಸ್ ಕಾಲೇಜು ಬಳಿ ತಿರುಗಾಡುತ್ತಿದ್ದ ಯುವ ಜೋಡಿಯೊಂದನ್ನು ಬಜರಂಗದಳ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ಮೂಲಕ ನೈತಿಕ ಪೊಲೀಸ್​​ಗಿರಿ ನಡೆಸಿದ್ದಾರೆ ಎಂಬ ದೂರಿನ ಮೇರೆಗೆ ಇಬ್ಬರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಯುವ ಜೋಡಿಗಳಿಬ್ಬರು ಸೈಂಟ್ ಆಗ್ನೆಸ್ ಕಾಲೇಜು ಬಳಿ ಇದ್ದ ಸಂದರ್ಭದಲ್ಲಿ ಇವರಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ಯುವ ಜೋಡಿಯನ್ನು ಬಜರಂಗದಳ ಕಾರ್ಯಕರ್ತರು ಕದ್ರಿ ಪೊಲೀಸರ ವಶಕ್ಕೆ ನೀಡಿದ್ದರು.

ಈ ಸಂದರ್ಭದಲ್ಲಿ ಯುವ ಜೋಡಿಯು ತಮ್ಮ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಬಿಎಸ್​ವೈ ಆಪ್ತನ ಮನೆ ಸೇರಿ ಬೆಂಗಳೂರಿನ ಹಲವೆಡೆ IT ದಾಳಿ: ಕಾಂಟ್ರಾಕ್ಟರ್ಸ್​, ಉದ್ಯಮಿಗಳಿಗೆ ಆಘಾತ

ABOUT THE AUTHOR

...view details