ಕರ್ನಾಟಕ

karnataka

ETV Bharat / state

ಮಂಗಳೂರು: 'ಮಹಾ' ವಲಸಿಗರಿಬ್ಬರಲ್ಲಿ ಕ್ವಾರಂಟೈನ್​​ ಬಳಿಕವೂ ಕೊರೊನಾ ದೃಢ! - Mangaluru case

ಮಹಾರಾಷ್ಟ್ರದಿಂದ ಬಂದ ಇಬ್ಬರಲ್ಲಿ ಕ್ವಾರಂಟೈನ್​​ ಬಳಿಕವೂ ಕೊರೊನಾ ಸೋಂಕು ಪತ್ತೆಯಾಗಿದ್ದು, ಅವರನ್ನು ಇದೀಗ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

two-corona-positive-case-in-mangaluru
ಸಂಗ್ರಹ ಚಿತ್ರ

By

Published : Jun 3, 2020, 9:15 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಸೋಂಕಿತರಿಬ್ಬರೂ ಮಹಾರಾಷ್ಟ್ರದಿಂದ ಬಂದಿದ್ದಾರೆ ಎನ್ನಲಾಗುತ್ತಿದೆ.

25 ವರ್ಷದ ಯುವಕ ಮೇ 28ರಂದು ದೆಹಲಿಯಿಂದ ರೈಲಿನಲ್ಲಿ ಬಂದಿದ್ದು, ಅವರನ್ನು ಕ್ವಾರಂಟೈನ್​​ನಲ್ಲಿ ಇರಿಸಲಾಗಿತ್ತು. ಇಂದು ಇವರಿಗೆ ಕೊರೊನಾ ದೃಢಪಟ್ಟಿದೆ. ಮತ್ತೋರ್ವ 36 ವರ್ಷದ ವ್ಯಕ್ತಿ ಪುಣೆಯಿಂದ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಿದ್ದ. ಕಾರ್ಕಳದಲ್ಲಿ ಅವರನ್ನು ಕ್ವಾರಂಟೈನ್​​ ಮಾಡಲಾಗಿತ್ತು. ಕ್ವಾರಂಟೈನ್ ಅವಧಿ ಪೂರ್ಣವಾದ ಬಳಿಕ ಕಟೀಲು ಗ್ರಾಮದ ಪಟ್ಟೆಜಾಲುವಿನ ಮನೆಯಲ್ಲಿ ವಾಸವಿದ್ದರು. ಅವರಿಗೆ ಇಂದು ಕೊರೊನಾ ದೃಢಪಟ್ಟಿದೆ. ಇಬ್ಬರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಗ್ರಹ ಚಿತ್ರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ಕು ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 25, 17, 24 ವರ್ಷದ ಪುರುಷರು ಮತ್ತು 33 ವರ್ಷದ ಮಹಿಳೆ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 139 ಎರಡು ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 73 ಮಂದಿ ಗುಣಮುಖರಾಗಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದು, 59 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 75 ಮಂದಿಯ ಗಂಟಲು ‌ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ABOUT THE AUTHOR

...view details